ಕಲಬುರಗಿ: ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೆ ವಿಷ ಸೇವಿಸಿ ಆತ್ಮ ಹತ್ಯೆಗೆ ಶರಣಾದ ಘಟನೆ ಜೇವರ್ಗಿ ತಾಲ್ಲೂಕಿನ ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯ ಅಂಕಲಗಾ ಗ್ರಾಮದ ತಾಂಡಾದಲ್ಲಿ ನಡೆದಿದೆ.
ಅಂಕಲಗಾ ತಾಂಡಾದ ನಿವಾಸಿ ಲಕ್ಷ್ಮಣ ಸೋಮುಲು ರಾಠೋಡ (65) ಮೃತ ರೈತರೆಂದು ಎಂದು ಗುರುತಿಸಲಾಗಿದೆ.
ಮೂರು ದಿನಗಳ ಹಿಂದೆ ವಿಷ ಸೇವನೆ ಮಾಡಿದ ರೈತನನ್ನು ಕಲಬುರ್ಗಿಯ ಜಿಮ್ಸ್ ಆಸ್ಪತ್ರೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
2ಎಕರೆ 10 ಗುಂಟೆ ಹೊಂದಿದ ಮೃತ ರೈತನ ಹೆಸರಿನಲ್ಲಿ ಪ್ರಗತಿ ಕೃಷ್ಣಾ ಬ್ಯಾಂಕ್‌ನಲ್ಲಿ 2 ಲಕ್ಷ, ಇಟಗಾ ಸಹಕಾರಿ ಬ್ಯಾಂಕ್ ನಲ್ಲಿ 50 ಸಾವಿರ ರೂ. ಸೇರಿದಂತೆ ಖಾಸಗಿಯಾಗಿ 6 ಲಕ್ಷ ರೂ. ಸಾಲವಿತ್ತು ಎಂದು ಮೂಲಗಳು ತಿಳಿಸಿವೆ.
ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.