ಕಲಬುರಗಿ: ಅಮರ್ಜಾ ಯೋಜನೆ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟೆ ಕೋಡಿಯ ಮುಖಾಂತರ ನದಿ ಪಾತಳಿಗೆ ಹರಿಬಿಡಲಾಗುತ್ತಿದ್ದು, ನದಿಯ ಅಕ್ಕಪಕ್ಕದ ರೈತರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಲಬುರಗಿ ಐಪಿಸಿ ವಿಭಾಗ ನಂ.-1ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಸಧ್ಯದ ಪರಿಸ್ಥಿತಿಯಲ್ಲಿ ಜಲಾನಯನ ಪ್ರದೇಶದಲ್ಲಿ ಇನ್ನೂ ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದ್ದು, ಹರಿದು ಬಂದ ಹೆಚ್ಚುವರಿ ನೀರನ್ನು ನದಿ ಪಾತಾಳಿಗೆ ಹರಿಬಿಡಲಾಗುತ್ತದೆ. ಆದ್ದರಿಂದ ನದಿ ಅಕ್ಕಪಕ್ಕದ ರೈತರು/ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿಗಳನ್ನು ಹಾಗೂ ನದಿಯ ಪಾತ್ರದಲ್ಲಿರುವ ಸಣ್ಣ ನೀರಾವರಿ ಮತ್ತು ಇನ್ನಿತರ ಯಾವುದೇ ಇಲಾಖೆಗಳಿಗೆ ಸಂಬಂಧಪಟ್ಟ ಆಸ್ತಿಗಳಿದ್ದಲ್ಲಿ ಮುಂಜಾಗ್ರತೆಯಾಗಿ ಸುರಕ್ಷಿತವಾಗಿಟ್ಟುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.