ಕಲಬುರಗಿ: ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕ ಡಾ. ಅಜಯ ಧರ್ಮಸಿಂಗ್ ಅವರು ಆಗಸ್ಟ್ 15 ರಂದು ಶುಕ್ರವಾರ ಬೆಳಿಗ್ಗೆ 7.20 ಗಂಟೆಗೆ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಅಂದು ಬೆಳಿಗ್ಗೆ 7.45 ಗಂಟೆಗೆ ಕಲಬುರಗಿ ಕೆ.ಕೆ.ಆರ್.ಡಿ.ಬಿ. ಮಂಡಳಿಯ ಕೇಂದ್ರ ಕಚೇರಿ, ಬೆಳಿಗ್ಗೆ 8.45 ಗಂಟೆಗೆ ಜೇವರ್ಗಿ ತಾಲೂಕು ಆಡಳಿತ ಸೌಧ ಆವರಣ, ಬೆಳಿಗ್ಗೆ 9.15 ಗಂಟೆಗೆ ಜೇವರ್ಗಿ ತಾಲೂಕು ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆಳಿಗ್ಗೆ 10 ಗಂಟೆಗೆ ಜೇವರ್ಗಿ ತಹಶೀಲ್ದಾರ ಕಚೇರಿಯಲ್ಲಿ “ಸಂವಿಧಾನ ರಕ್ಷಿಸಿ-ಪ್ರಜಾಪ್ರಭುತ್ವ ಉಳಿಸಿ” ಪಥ ಸಂಚನಲನದಲ್ಲಿ ಭಾಗವಹಿಸುವರು. ಬೆಳಿಗ್ಗೆ 11.30 ಗಂಟೆಗೆ ಕಲಬುರಗಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 5.30 ಗಂಟೆಗೆ ಕಲಬುರಗಿ ನೂತನ ವಿದ್ಯಾಲಯದ ಆವರಣದಲ್ಲಿರುವ ಸಂಗಮೇಶ್ವರ ಸಭಾಗೃಹದಲ್ಲಿ ಕಲಬುರಗಿ ಬ್ರಾಹ್ಮಣ ವೇದಿಕೆ ವತಿಯಿಂದ ಹಮ್ಮಿಕೊಂಡ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 6.30 ಗಂಟೆಗೆ ಜೇವರ್ಗಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಆಗಸ್ಟ್ 16 ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಚೌಡೇಶ್ವರಿ ಕಾಲೋನಿಯಲ್ಲಿ ಶ್ರೀ ಮಹಾಯೋಗಿನಿ ಮಾತಾ ಮಾಣಿಕೇಶ್ವರಿ ಅಮ್ಮನವರ ಹೊಸದಾಗಿ ನಿರ್ಮಿಸಿದ ದೇವಸ್ಥಾನ ಮತ್ತು ಮಾತಾ ಮಾಣಿಕೇಶ್ವರಿ ಅಮ್ಮನವರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12 ಗಂಟೆಗೆ ಕಲಬುರಗಿ ಕೆ.ಕೆ.ಆರ್.ಡಿ.ಬಿ. ಕೇಂದ್ರ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಕೆ.ಕೆ.ಆರ್.ಡಿ.ಬಿ. ಕೇಂದ್ರ ಕಚೇರಿಯಲ್ಲಿ ಸಾರ್ವಜನಿಕರು ಹಾಗೂ ಮುಖಂಡರೊಂದಿಗೆ ಭೇಟಿ ನೀಡುವರು. ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಆಗಸ್ಟ್ 17 ರಂದು ಭಾನುವಾರ ಜೇವರ್ಗಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 12.10 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.