ಕಲಬುರಗಿ| ಡಾ.ಶರಣಬಸವಪ್ಪ ಅಪ್ಪ ವಿಧಿವಶ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಆದೇಶ

Date:

Share post:

ಕಲಬುರಗಿ: ಶ್ರೀ ಶರಣಬಸವೇಶ್ವರ ಸಂಸ್ಥಾನದ 8ನೆಯ ಪೀಠಾಧಿಪತಿ, ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾಗಿದ್ದ ಡಾ.ಶರಣಬಸವಪ್ಪ ಅಪ್ಪ ನಿಧನದ ಹಿನ್ನೆಲೆ ಅವರ ಅಂತಿಮ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಲಾಗಿದೆ.

ಈ ಕುರಿತು ರಾಜ್ಯಸರ್ಕಾರದ ಪರವಾಗಿ ಸಿಆಸುಇ (ರಾಜ್ಯ ಶಿಷ್ಟಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ-1(ಪ್ರ) ಬಾಣದರಂಗಯ್ಯ.ಎನ್.ಆ‌ರ್ ಅವರು ಅಧಿಸೂಚನೆ ಹೊರಡಿಸಿದ್ದು, ಶ್ರೀ ಶರಣಬಸವಪ್ಪ ಅಪ್ಪ, ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಹಾಗೂ ಶ್ರೀ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳು, ಕಲಬುರಗಿ ಜಿಲ್ಲೆ ಇವರು ದಿನಾಂಕ:14.08.2025ರಂದು ನಿಧನರಾಗಿರುತ್ತಾರೆ. ಸದರಿಯವರ ನಿಧನಕ್ಕೆ ಸರ್ಕಾರವು ತೀವು ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಕರ್ನಾಟಕರಾಜ್ಯಪಾಲರ ಆಜ್ಞಾನುಸಾರ ಆದೇಶಿಸಿದೆ ಎಂದು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ಚರ್ಮ ಕ್ಯಾನ್ಸರ್ ಜಾಗೃತಿ ಶಿಬಿರ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಖ್ವಾಜಾ ಬಂದಾ ನವಾಜ್ ದರ್ಗಾದ 622ನೇ ಅದ್ಧೂರಿ ಸಂದಲ್ ಮೆರವಣಿಗೆ

ಕಲಬುರಗಿ, ಮೇ 3: ನಗರದ ಐತಿಹಾಸಿಕ ಹಾಗೂ ಧಾರ್ಮಿಕ ಕೇಂದ್ರ ಹಾಗೂ...

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ...

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...