ಕಲಬುರಗಿ| ಡಾ.ಶರಣಬಸವಪ್ಪ ಅಪ್ಪಾಜಿಯವರಿಗೆ ಅಂತಿಮ‌ ನಮನ ಸಲ್ಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ

Date:

Share post:

ಕಲಬುರಗಿ: ತ್ರಿವಿಧ ದಾಸೋಹಿ ಕಲಬುರಗಿಯ ಶ್ರೀ ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪಾಜಿ ಅವರು ಗುರುವಾರ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ

ರಾಜ್ಯದ ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರು ಸರ್ಕಾರ ಪರವಾಗಿ ಭಾಗವಹಿಸಿ ಪುಜ್ಯರಿಗೆ ಅಂತಿಮ ನಮನ ಸಲ್ಲಿಸಿದರು.

ಬೆಂಗಳೂರಿನಿಂದ‌ ವಿಶೇಷ ವಿಮಾನದ ಮೂಲಕ ಆಗಮಿಸಿದ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ‌ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಇಲ್ಲಿನ ಶರಣಬಸವೇಶ್ವರ ದೇವಸ್ಥಾನದಲ್ಲಿ ಇರಿಸಲಾಗಿದ್ದ ಪೂಜ್ಯ ಅಪ್ಪಾಜಿ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ಅರ್ಪಿಸಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಶ್ರೀ ಶರಣಬಸವೇಶ್ವರ ಸಂಸ್ಥಾನದ‌ ಕೊಡುಗೆ ಅಪಾರವಾಗಿದೆ. ನಾಡಿನಾದ್ಯಂತ ಅಸಂಖ್ಯಾತ ಭಕ್ತ‌ ವೃಂದ ಹೊಂದಿರುವ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಅವರ ಲಿಂಗೈಕ್ಯ ಸುದ್ದಿ ಅರಗಿಸಿಕೊಳ್ಳಲು ಆಗುತ್ತಿಲ್ಲ. ಪೂಜ್ಯ ಅಪ್ಪಾಜಿ ಅವರು, ಅನ್ನ, ಅಕ್ಷರ ದಾಸೋಹದ ಮೂಲಕ ಜಾತಿ, ಧರ್ಮ ರಹಿತ ಸಮ ಸಮಾಜ ನಿರ್ಮಿಸಲು ಕಾರಣಿಭೂತರಾಗಿದ್ದಾರೆ ಎಂದರು.

ಸರ್ಕಾರಿ ಗೌರವ ಸಲ್ಲಿಕೆ:

ಇದೇ‌ ಸಂದರ್ಭದಲ್ಲಿ ಜ್ಞಾನ ಭಂಡಾರಿ ಡಾ.ಶರಣಬಸವಪ್ಪ ಅಪ್ಪಾಜಿ ಅವರ ಲಿಂಗೈಕ್ಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ಸಕಲ‌ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ಆದೇಶಿಸಿರುವುದರಿಂದ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ನೇತೃತ್ವದಲ್ಲಿ ಜಿಲ್ಲಾಡಳಿತ ಮತ್ತು ತಾಲೂಕಾಡಳಿತದ ಅಧಿಕಾರಿಗಳ ತಂಡವು ಪೂಜ್ಯರ ಪಾರ್ಥಿವ ಶರೀರಕ್ಕೆ ಪುಷ್ಪನಮನದೊಂದಿಗೆ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ಮೃತರ ಗೌರವಾರ್ಥವಾಗಿ ಪಿ.ಎಸ್.ಐ. ಮಹಾದೇವ ಪಾಟೀಲ ನೇತೃತ್ವದ ಪೊಲೀಸ್ ಮತ್ತು ಬ್ಯಾಂಡ್ ತುಕಡಿ ಮೂರು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿತ್ತು.

ಕರ್ನಾಟಕ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ, ಶಾಸಕರಾದ ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ಕಲಬುರಗಿ ಉತ್ತರ ಶಾಸಕಿ ಮತ್ತು ಕರ್ನಾಟಕ ರೇಷ್ಮೆ ಅಭಿವೃದ್ಧಿ ನಿಯಮಿತದ ಅಧ್ಯಕ್ಷೆ ಕನೀಜ್ ಫಾತಿಮಾ, ಬಸವರಾಜ ಮತ್ತಿಮೂಡ, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ‌ ನಿಯಮಿತದ ಅಧ್ಯಕ್ಷ ಬಾಬುರಾವ‌ ಚಿಂಚನಸೂರು, ವಿಧಾನ ಪರಿಷತ್ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಚಂದ್ರಶೇಖರ ಪಾಟೀಲ, ಶಶೀಲ ಜಿ.‌ ನಮೋಶಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಪ್ರಾದೇಶಿಕ ಆಯುಕ್ತೆ ಜಹೀರಾ ನಸ್ಸೀಮ್, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ಕೆ.ಕೆ.ಆರ್.ಡಿ.ಬಿ. ಮಂಡಳಿ ಕಾರ್ಯದರ್ಶಿ ನಲಿನ್ ಅತುಲ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ.ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಹೆಚ್ಚುವರಿ ಎಸ್.ಪಿ. ಮಹೇಶ ಮೇಘಣ್ಣನವರ್, ಕಲಬುರಗಿ ತಹಶೀಲ್ದಾರ ಕೆ.ಆನಂದಶೀಲ ಸೇರಿದಂತೆ ಅನೇಕ ಅಧಿಕಾರಿಗಳು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....