ಕಲಬುರಗಿ| ಭಿನ್ನ ಕೆನೆಪದರ ನೀತಿಯಿಂದ ರಾಜ್ಯದ ವಿಧ್ಯಾರ್ಥಿಗಳಿಗೆ ಅನ್ಯಾಯ: ಶಶೀಲ್ ನಮೋಶಿ

Date:

Share post:

ಕಲಬುರಗಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿಂದುಳಿದ ವರ್ಗಗಳಿಗೆ ಮಿಸಲಾತಿ ನೀಡುವಾಗ ಭಿನ್ನ ಕೆನೆಪದರ ನೀತಿ ಅನ್ವಯಿಸುತ್ತಿರುವುದರಿಂದಾಗಿ ವೇತನದಾರರ ಮಕ್ಕಳು ಅಖಿಲ ಭಾರತ ಹಾಗೂ ರಾಜ್ಯ ಕೋಟಾದಡಿ ವೈದ್ಯಕೀಯ, ಎಂಜಿನಿಯರಿಂಗ್ ಕೋಟಾದಡಿ ಪ್ರವೇಶ ಪಡೆಯುವಾಗ ವಿದ್ಯಾರ್ಥಿಗಳು ಭಾರೀ ಅನ್ಯಾಯ ಅನುಭವಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದರು.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (ಎನ್ ಟಿಎ) ವೈದ್ಯಕೀಯ, ದಂತ ವೈದ್ಯಕೀಯ , ಆಯುರ್ವೇದ, ಪಶುವೈದ್ಯಕೀಯ,, ಹೋಮಿಯೋಪಥಿ ಕೊರ್ಸಗಳ ಪ್ರವೇಶಕ್ಕಾಗಿ ಪ್ರತಿ ವರ್ಷ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್), ಐಐಟಿ ಸೇರಿದಂತೆ ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ನಡೆಸುತ್ತದೆ. ನೀಟ್, ಜೆಇಇ ಸೇರಿದಂತೆ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಗಳನ್ನು ಬರೆದು ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪೋಷಕರ ವೇತನ ಆದಾಯ ₹8 ಲಕ್ಷಕ್ಕಿಂತ ಹೆಚ್ಚಿದ್ದರೂ ಅಂತಹ ಮಕ್ಕಳಿಗೆ ಅಖಿಲ ಭಾರತ ಕೋಟಾದ ಅಡಿ ಪ್ರವೇಶ ನೀಡಲಾಗುತ್ತದೆ. ಅದೇ ವಿದ್ಯಾರ್ಥಿಗಳು ರಾಜ್ಯದ ಕೋಟಾದಡಿ ಪ್ರವೇಶ ಪಡೆಯುವಾಗ ಕೆನೆಪರದ ನೀತಿ ಅನ್ವಯಿಸಲಾಗುತ್ತಿದೆ ಎಂದರು.

ರಾಜ್ಯದಲ್ಲಿನ ಶಿಕ್ಷಣ ಮತ್ತು ಉದ್ಯೋಗ ಮೀಸಲಾತಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ಕ್ಕೆ ಕೆನೆಪದರ ಅನ್ವಯವಾಗುವುದಿಲ್ಲ. ಆದರೆ, 2ಎ, 2ಬಿ, 3ಎ, ಮತ್ತು 3ಬಿ ಪ್ರ-ವರ್ಗದಲ್ಲಿ ಬರುವ ಇತರೆ ಹಿಂದುಳಿದ ಜಾತಿಗಳಿಗೆ ಕೆನೆಪದರ ಅನ್ವಯವಾಗುತ್ತದೆ. ಹೀಗಾಗಿ, ₹8 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಪಡೆಯುವ ನೌಕರರ ಮಕ್ಕಳು ವೈದ್ಯಕೀಯ, ಎಂಜಿನಿಯರಿಂಗ್ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಸಾಮಾನ್ಯ ವರ್ಗದಡಿಯೇ ಸ್ಪರ್ಧಿಸುವ ಪರಿಸ್ಥಿತಿ ಇದೆ. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಹಿಂದುಳಿದ ಕೆನೆಪದರಕ್ಕೆ ಕೃಷಿ ಹಾಗೂ ವೇತನ ಆದಾಯ ಪರಿಗಣಿಸುವುದಿಲ್ಲ. ಕೇಂದ್ರ ಸರ್ಕಾರದ 1993ರ ಅಧಿಸೂಚನೆಯಂತೆ ರಾಜ್ಯವೂ ಕೃಷಿ ಮತ್ತು ವೇತನ ಆದಾಯಹೊರಗಿಟ್ಟು ಕೆನೆಪದರ ನೀತಿ ಅನುಸರಿಸಬೇಕು ಎಂದು ವಿವರಿಸಿದರು.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗ ಮೀಸಲಾತಿಯಲ್ಲಿ ಕೆನೆಪದರ ಕುರಿತು ವಿವಿಧ ಆದೇಶಗಳನ್ನು ಹೊರಡಿಸಿವೆ. ಕೇಂದ್ರ ಸರ್ಕಾರ ಕೆನೆಪದರ ನೀತಿ ಕುರಿತು ಸ್ಪಷ್ಟ ಮಾರ್ಗಸೂಚಿ ಹೊರಡಿಸಿದೆ, ಹಿಂದುಳಿದ ವರ್ಗದ ಕುಟುಂಬಗಳ ವಾರ್ಷಿಕ ಆದಾಯ ಲೆಕ್ಕ ಹಾಕುವಾಗ ಕೃಷಿ ಮತ್ತು ವೇತನ ಪರಿಗಣಿಸದೆ, ವ್ಯಾಪಾರ, ವ್ಯವಹಾರ, ಕೈಗಾರಿಕೆ ಮತ್ತಿತರ ಸಂಪತ್ತಿನ ಅದಾಯಗಳನ್ನು ಪರಿಗಣಿಸಲಾಗುತ್ತದೆ. ಕರ್ನಾಟಕ ಹೊರತುಪಡಿಸಿ ಇತರ ಬಹುತೇಕ ರಾಜ್ಯಗಳು ಕೇಂದ್ರದ ನಿಯಮಗಳನ್ನೇ ಅಳವಡಿಸಿಕೊಂಡಿವೆ.
ಕರ್ನಾಟಕದಲ್ಲಿ ಮಾತ್ರ ವೇತನವನ್ನು ಒಳಗೊಂಡು ವಾರ್ಷಿಕ ಆದಾಯ ಲೆಕ್ಕ ಹಾಕಲಾಗುತ್ತದೆ ಎಂದು ಮಿಸಲಾತಿ ಭಿನ್ನ ಕೆನೆಪದರ ನೀತಿಯಿಂದ ಕರ್ನಾಟಕದ ವಿಧ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಸದನದಲ್ಲಿ ಪ್ರಸ್ತಾಪಿಸಿದರು.

ಇದಕ್ಕೆ ಉತ್ತರಿಸಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡರು, ಇದು ನನ್ನ ಇಲಾಖೆ ಸಂಬಂಧಿಸಿದ ವಿಷಯವಾದರು ಸಮಾಜ ಕಲ್ಯಾಣ ಇಲಾಖೆ ಹಾಗು ಸಂಬಂಧಿಸಿದ ಇಲಾಖೆಗಳ ಅಭಿಪ್ರಾಯ ಸಂಗ್ರಹಿಸಿ ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....