ಕಲಬುರಗಿ: ನಗರದಲ್ಲಿರುವ ರೈಲ್ವೆ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿದ ಬೆನ್ನಲ್ಲೇ ಸ್ಥಳೀಯ ಪೊಲೀಸರು ಧಿಡೀರ್ ನೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮಂಗಳವಾರ ಹುಸಿ ಬಾಂಬ್ ಬೆದರಿಕೆ ಕರೆ ಬಂದ ಬಳಿಕ ತಕ್ಷಣವೇ ಎಚ್ಚೆತ್ತ ಇಲ್ಲಿನ ಸ್ಟೇಷನ್ ಬಜಾರ್ ಪೋಲಿಸ್ ಠಾಣೆ ಪೋಲಿಸರು ಹಾಗೂ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ರೈಲ್ವೆ ನಿಲ್ದಾಣ ತಪಾಸಣೆ ನಡೆಸಲಾಗಿದೆ.
ಅಪರಿಚಿತ ವ್ಯಕ್ತಿಯಿಂದ ಬೆಂಗಳೂರಿನ 112ಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಹೇಳಿದ್ದಾನೆ. ಬೆಂಗಳೂರಿನ 112 ಪೊಲೀಸ್ ಅಧಿಕಾರಿಗಳು ಕಲಬುರಗಿ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ, ಬಳಿಕ ತಕ್ಷಣವೇ ರೈಲ್ವೆ ನಿಲ್ದಾಣಕ್ಕೆ ಪೊಲೀಸರು ಧಾವಿಸಿ, ಎಲ್ಲ ಕಡೆಗಳಲ್ಲೂ ತಪಾಸಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ರೈಲ್ವೆ ನಿಲ್ದಾಣದ ಎಲ್ಲ ಕಡೆಗಳಲ್ಲೂ ತಪಾಸಣೆ ನಡೆಸಿದ ಬಳಿಕ ಇದೊಂದು ಹುಸಿ ಬಾಂಬ್ ಕತೆಯಾಗಿದೆ ಎಂದು ನಿಟ್ಟುಸಿರು ಬಿಟ್ಟಿದ್ದಾರೆ. ತಪಾಸಣೆ ಬಳಿಕ ಹುಸಿ ಬಾಂಬ್ ಬೆದರಿಕೆಯೊಡ್ಡಿದ ವ್ಯಕ್ತಿಗಾಗಿ ಪೋಲಿಸರಿಂದ ಹುಡುಕಾಟದಲ್ಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಹುಸಿ ಬಾಂಬ್ ಕರೆ ಬಂದಿದ್ದು, ಕೂಡಲೇ ಸ್ಥಳಕ್ಕೆ ಶ್ವಾನ ದಳ, ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳ (BDDS) ಮತ್ತು ವಿದ್ವಂಸಕ ಕೃತ್ಯ ತಪಾಸಣೆ ದಳ (ASC) ತಂಡವು ಸ್ಥಳ ಸ್ಥಳ ಪರಿಶಿಲೀಸಲಾಗಿ ಯಾವುದೇ ರೀತಿಯ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿರುವುದಿಲ್ಲ. ಇದೊಂದು ಹುಸಿ ಬಾಂಬ್ ಕರೆಯಾಗಿದ್ದು, ಹುಸಿ ಬಾಂಬ್ ಕರೆ ಮಾಡಿರುವ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಕಾರಣ ಇದೊಂದು ಸುಳ್ಳು ಹುಸಿ ಬಾಂಬ್ ಬೆದರಿಕೆ ಕರೆಯಾಗಿದ್ದು ಸಾರ್ವಜನಿಕರು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ನಗರ ಪೊಲೀಸ್ ಆಯುಕ್ತಾಲಯ ಪ್ರಕಟಣೆಯಲ್ಲಿ ತಿಳಿಸಿದೆ.