ಕಲಬುರಗಿ| ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಜಯ; ಕೈ ತೆಕ್ಕೆಗೆ ಕಾಳಗಿ ಪಟ್ಟಣ ಪಂಚಾಯತ್ 

Date:

Share post:

ಕಲಬುರಗಿ: ಕಾಳಗಿ ಪಟ್ಟಣ ಪಂಚಾಯತ್ ನ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ 11 ಸ್ಥಾನಗಳಲ್ಲಿ ಆರು ಅಭ್ಯರ್ಥಿಗಳು ಗೆಲ್ಲುವುದರ ಮೂಲಕ ಕಾಂಗ್ರೆಸ್ ಪಕ್ಷ ಚೊಚ್ಚಲ ಪಟ್ಟಣ ಪಂಚಾಯತ್ ನ ಅಧಿಕಾರದ ಗದ್ದುಗೆ ಏರಿದೆ.

ಕಾಳಗಿ ಪಪಂ ಒಟ್ಟು 11 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 6 ಸ್ಥಾನ, ಬಿಜೆಪಿ 5 ಸ್ಥಾನ ‌ಗೆಲುವು ಸಾಧಿಸಿದೆ.

ಅದರಲ್ಲಿ ವಾರ್ಡ್ ನಂ. 1 ರಲ್ಲಿ‌ ಕಾಂಗ್ರೆಸ್ ಅಭ್ಯರ್ಥಿ ಗುರುರಾಜ ತಿಪ್ಪಯ್ಯ ಮದ್ದೂರು, ವಾರ್ಡ್ – 2 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ್ ಪರಮೇಶ್ವರ ಮಡಿವಾಳ, ವಾರ್ಡ್ ನಂ. 3ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಲಿತಾಬಾಯಿ ಸಿದ್ರಾಮಪ್ಪ‌ ಕಮಲಾಪೂರ, ವಾರ್ಡ್ ನಂ. 4 ರಲ್ಲಿ ಬಿಜೆಪಿ ಅಭ್ಯರ್ಥಿ ಅಂಬವ್ವ ಕಾಳಪ್ಪ ರಾಜಾಪೂರ, ವಾರ್ಡ್ ನಂ.5 ರಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಚಂದ್ರಕಾಂತ ‌ಕಿಟ್ಟದ, ವಾರ್ಡ್ ನಂ.6 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಲಿಯ ಬೇಗಂ ಮಹೆಬೂಬ ಬಿಜಾಪುರ, ವಾರ್ಡ್ ನಂ. 7ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ತಿಮ್ಮಯ್ಯ ಬೆಲೂರ, ವಾರ್ಡ್ ನಂ. 8ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಷಾರಾಣಿ ದತ್ತಾತ್ರೇಯ ಗುತ್ತೇದಾರ, ವಾರ್ಡ್ ನಂ.9 ರಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಕಲಾ ಚಂದ್ರಕಾಂತ, ವಾರ್ಡ್ ನಂ.10 ರಲ್ಲಿ ಬಿಜೆಪಿ ಅಭ್ಯರ್ಥಿ ಜಿತೇಂದ್ರ ನೂರಸಿಂಗ್ ರಾಠೋಡ, ವಾರ್ಡ್ ನಂ. 11ರಲ್ಲಿ ಬಿಜೆಪಿ ಅಭ್ಯರ್ಥಿ ಪಾರ್ವತಿ ವಿಠ್ಠಲರಾವ ಅವರು ಗೆಲುವು ಸಾಧಿಸಿದ್ದಾರೆ.

ಚುನಾವಣೆಯಲ್ಲಿ ಗೆದ್ದ ಬಳಿಕ ಉಭಯ ಪಕ್ಷಗಳ ವಿಜಯಿಶಾಲಿಗಳು ಹಾಗೂ ಸ್ಥಳೀಯ ಮುಖಂಡರು ಸಂಭ್ರಮಾಚರಣೆ ಮಾಡಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...

ಕಲಬುರಗಿ: ಗುಂಡಿನ ದಾಳಿ; ವ್ಯಕ್ತಿಯ ಭೀಕರ ಕೊಲೆ

ಕಲಬುರಗಿ: ಬಲರಾಮ ಚೌಕ್ ನಿಂದ ವಾಡಿ ಪಟ್ಟಣಕ್ಕೆ ಸ್ಕೂಟಿ ಮೇಲೆ ಹೋಗುತ್ತಿದ್ದ...

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...