ಕಲಬುರಗಿ| ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾಗಿ ಶೋಭಾ ದೇಸಾಯಿ ಆಯ್ಕೆ; ಮೊದಲ ಬಾರಿಗೆ ಮಹಿಳೆ ಆಯ್ಕೆ 

Date:

Share post:

ಕಲಬುರಗಿ: ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರನ್ನಾಗಿ 52ನೇ ವಾರ್ಡ್‌ನ ಪಾಲಿಕೆ ಸದಸ್ಯೆ ಶೋಭಾ ಗುರುರಾಜ ದೇಸಾಯಿ ಅವರನ್ನು ನೇಮಕ ಮಾಡಲಾಗಿದೆ.

ಪಕ್ಷದ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಚಂದು ಪಾಟೀಲ ಹಾಗೂ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ಅವರ ನೇತೃತ್ವದಲ್ಲಿ ನಡೆದ ಪಾಲಿಕೆ ಸದಸ್ಯರು, ಮುಖಂಡರ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಸಂಬಂಧ ಮೇಯರ್ ವರ್ಷಾ ಜಾನೆ ಅವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ.

ಆ ಮೂಲಕ ಪಾಲಿಕೆಯ ಮೇಯರ್, ಉಪಮೇಯರ್, ವಿರೋಧ ಪಕ್ಷದ ನಾಯಕ ಹುದ್ದೆಗಳು ಮಹಿಳೆಯರ ಪಾಲಾದಂತಾಗಿವೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ದತ್ತಾತ್ರೇಯ ಪಾಟೀಲ, ‘ಪಾಲಿಕೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಈ ಹುದ್ದೆಗೆ ಆಯ್ಕೆಯಾಗಿರುವುದು ಮಹತ್ವದ ಕ್ಷಣವಾಗಿದ್ದು, ಮಹಿಳೆಯರಿಗೆ ವಿಶೇಷ ಗೌರವ ನೀಡುವ ಮೂಲಕ ನಮ್ಮ ಪಕ್ಷವು ಹೊಸ ದಾಖಲೆ ನಿರ್ಮಿಸಿದೆ. ಮಹಿಳೆಯರಿಗೆ ರಾಜಕೀಯದಲ್ಲಿ ನೀಡಲಾಗುತ್ತಿರುವ ಪ್ರಾಮುಖ್ಯತೆ, ಸಮಾಜದಲ್ಲಿ ಹೆಣ್ಣುಮಕ್ಕಳ ಸ್ಥಾನವನ್ನು ಮತ್ತಷ್ಟು ಎತ್ತಿ ಹಿಡಿಯುವಂತಹುದು. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಶೇ 33ರಷ್ಟು ಮಹಿಳಾ ಮೀಸಲಾತಿ ವಿಧೇಯಕದ ಆತ್ಮವನ್ನು ಪ್ರತಿಬಿಂಬಿಸುವಂತಾಗಿದೆ’ ಎಂದಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...