ಕಲಬುರಗಿ| ಬೇರೆ ಜಾತಿ ಯುವಕನನ್ನ ಮದ್ವೆಗೆ ಪಟ್ಟು; ಮಗಳ ಜೀವ ತೆಗೆದ ತಂದೆ: ಬಂಧನ

Date:

Share post:

ಕಲಬುರಗಿ: ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕಾಗಿ ತನ್ನ ಮಗಳನ್ನೇ ಕತ್ತು ಹಿಸುಕಿ, ಸುಟ್ಟು ಹಾಕಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಮೇಳಕುಂದಾ (ಬಿ) ಗ್ರಾಮದಲ್ಲಿ ನಡೆದಿದೆ.

ಕವಿತಾ ಶಂಕರ ಕೊಳ್ಳೂರ(18) ಎಂಬ ಯುವತಿಯೇ ಮರ್ಯಾದಾ ಹತ್ಯೆಗೆ ಬಲಿಯಾದ ದುರ್ದೈವಿ ಎಂದು ತಿಳಿದುಬಂದಿದೆ.

ಆರೋಪಿಗಳಾದ ಮೃತ ಯುವತಿಯ ತಂದೆ ಶಂಕರ ಕೊಳ್ಳುರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನೊಂದಿಗೆ ಇದ್ದ ಇನ್ನಿಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಿಂಗಾಯತ ಸಮುದಾಯದ ಯುವತಿ ಕವಿತಾ, ಮೇಳಕುಂದಾ (ಬಿ) ಗ್ರಾಮದಲ್ಲೇ ಕುರುಬ ಸಮುದಾಯದ ಯುವಕನನ್ನು ಪ್ರೀತಿಸಿದ್ದಕ್ಕಾಗಿ ತಂದೆ ಹಾಗೂ ಕುಟುಂಬಸ್ಥರು ಕಾಲೇಜು ಬಿಡಿಸಿದ್ದಾರೆ. ಆದರೂ ಆಕೆ ಯುವಕನನ್ನು ಪ್ರೀತಿಸುವುದನ್ನು ಬಿಡದಿರಲು ತೀರ್ಮಾನಿಸಿದ್ದಾಳೆ. ಇದರಿಂದ ಕೋಪಗೊಂಡ ತಂದೆ ಹಾಗೂ ಆಕೆಯ ಸಂಬಂಧಿಕರು ಸೇರಿ ಯುವತಿಯನ್ನು ಕೊಲೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೇಳಕುಂದಾ (ಬಿ) ಗ್ರಾಮದಲ್ಲಿ ಪ್ರೀತಿಸುತ್ತಿದ್ದ ಇಬ್ಬರ ಪ್ರೇಮಿಗಳ ಜಾತಿಗಳು ಬೇರೆ ಬೇರೆಯಾಗಿವೆ. ಆ ಎರಡು ಜಾತಿಗಳ ಮಧ್ಯೆ ಹಲವು ವರ್ಷಗಳಿಂದ ಪರಸ್ಪರ ದ್ವೇಷ ಇತ್ತು ಎನ್ನಲಾಗಿದೆ. ಅದೇ ಕಾರಣಕ್ಕಾಗಿ ಮಗಳು ಕವಿತಾ, ಯುವಕನ ಜೊತೆ ಸಂಬಂಧ ಇದ್ದರೆ ಮರ್ಯಾದೆ ಹೋಗುತ್ತದೆ ಎಂದು ಭಾವಿಸಿ, ತಂದೆ ಸೇರಿದಂತೆ ಸಂಬಂಧಿಗಳು ಕೂಡಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸ್ ಕಮೀಷನರ್ ಡಾ. ಶರಣಪ್ಪ ಎಸ್.ಡಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ: ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ನೀಗಲು ರೂ 208.67 ಕೋಟಿ. ಬಿಡುಗಡೆ- ಸಚಿವ ಪ್ರಿಯಾಂಕ್ ಖರ್ಗೆ 

ತುರ್ತು ಕಾಮಗಾರಿಗಳಿಗೆ ಪುನಃ 72 ಕೋಟಿ ರೂ.ಬಿಡುಗಡೆ: ಪ್ರಿಯಾಂಕ್ ಖರ್ಗೆ ಬೆಂಗಳೂರು: ರಾಜ್ಯದ...

ಕಲಬುರಗಿ: ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ಚರ್ಮ ಕ್ಯಾನ್ಸರ್ ಜಾಗೃತಿ ಶಿಬಿರ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಖ್ವಾಜಾ ಬಂದಾ ನವಾಜ್ ದರ್ಗಾದ 622ನೇ ಅದ್ಧೂರಿ ಸಂದಲ್ ಮೆರವಣಿಗೆ

ಕಲಬುರಗಿ, ಮೇ 3: ನಗರದ ಐತಿಹಾಸಿಕ ಹಾಗೂ ಧಾರ್ಮಿಕ ಕೇಂದ್ರ ಹಾಗೂ...

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ...