ಕಲಬುರಗಿ| ಬಿಜೆಪಿ ಜೊತೆಗೂಡಿ ಸರ್ಕಾರ ರಚನೆಗೆ ಡಿಕೆಶಿ ಮುಂದಾಗಿದ್ದರು: ಬಸನಗೌಡ ಪಾಟೀಲ ಯತ್ನಾಳ್

Date:

Share post:

ಕಲಬುರಗಿ: ಡಿಸಿಎಂ ಡಿ.ಕೆ. ಶಿವಕುಮಾ‌ರ್ ಅವರು ಈ ಹಿಂದೆ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿ ಸರ್ಕಾರ ರಚನೆಗೆ ಮುಂದಾಗಿದ್ದರು ಎಂದು ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಅವರು, ಡಿಕೆಶಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿ ರಹಸ್ಯ ಸಭೆ ನಡೆದಿತ್ತು. ತಮಗೆ 60ರಿಂದ 70 ಕಾಂಗ್ರೆಸ್ ಶಾಸಕರ ಬೆಂಬಲವಿದೆ ಎಂದು ಡಿಕೆಶಿ ಪರವಾಗಿ ಹೇಳಲಾಗಿತ್ತು. ಹಾಗಾಗಿ ಅಲ್ಲಿನ ಮಾತುಕತೆಯ ಪ್ರಕಾರ ಸಿಎಂ ಹುದ್ದೆ ಡಿ.ಕೆ ಶಿವಕುಮಾ‌ರ್ ಹಾಗೂ ಡಿಸಿಎಂ ಹುದ್ದೆ ವಿಜಯೇಂದ್ರ ಅವರಿಗೆ ನೀಡುವ ನಿರ್ಧಾರ ಮಾಡಲಾಗಿತ್ತು. ಆದರೆ ಡಿಕೆಶಿ ಪರ 12 ರಿಂದ 13 ಶಾಸಕರೂ ಇಲ್ಲ ಎನ್ನುವುದನ್ನು ನಮ್ಮ ಆಂತರಿಕ ವರದಿಯಿಂದ ಗೊತ್ತಾಯಿತು. ಹಾಗಾಗಿ ಅದು ಅಲ್ಲಿಗೆ ನಿಂತು ಹೋಯಿತು ಎಂದರು.

 

ಅಲ್ಲದೆ, ಡಿಕೆಶಿ ಅವರು ಬಿಜೆಪಿ ಜೊತೆಗೆ ಕೈಜೋಡಿಸಿದರೆ ಅಷ್ಟು ಶಾಸಕರೂ ಅವರೊಂದಿಗೆ ಇರುವುದಿಲ್ಲ ಎಂಬ ಮಾತುಗಳೂ ಕೇಳಿಬಂದವು. ಬಹುತೇಕ ಶಾಸಕರು ಸಿದ್ದರಾಮಯ್ಯ ಅವರೊಂದಿಗೆ ಇದ್ದಾರೆ. ಇನ್ನೊಂದೆರಡು ವರ್ಷ ಮುಸ್ಲಿಮರ ಪರ ನಿಲುವುಳ್ಳ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇದ್ದರೂ ಚಿಂತೆ ಇಲ್ಲ. ಡಿ.ಕೆ.ಶಿವಕುಮಾರ್ ಅವರಂತಹ ಭ್ರಷ್ಟರು ಮುಖ್ಯಮಂತ್ರಿಯಾಗಬಾರದು. ಶಿವಕುಮಾ‌ರ್ ಹಾಗೂ ವಿಜಯೇಂದ್ರ ಇಬ್ಬರೂ ಭ್ರಷ್ಟರು. ಇಬ್ಬರೂ ಒಂದಾದರೆ ಕರ್ನಾಟಕವನ್ನೇ ಮಾರಿಬಿಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...