ಕಲಬುರಗಿ| ಕಲ್ಯಾಣ ಕರ್ನಾಟಕ ಉತ್ಸವದ ಯಶಸ್ಸಿಗೆ ಸಿದ್ಧತೆ ಮಾಡಿಕೊಳ್ಳಿ: ನಳಿನ್ ಅತುಲ್

Date:

Share post:

 

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಲು ಮತ್ತು ಪ್ರಜಾ ಸೌಧ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸೆ.16 ಮತ್ತು 17 ರಂದು ಎರಡು ದಿನಗಳ ಕಾಲ ಕಲಬುರಗಿಗೆ ಆಗಮಿಸಲಿದ್ದು, ಕಾರ್ಯಕ್ರಮ ಯಶಸ್ವಿಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಕೆ.ಕೆ.ಆರ್.ಡಿ.ಬಿ ಮಂಡಳಿ ಕಾರ್ಯದರ್ಶಿ ನಳಿನ್ ಅತುಲ್ ಹೇಳಿದರು.

ಮಂಗಳವಾರ ಇಲ್ಲಿನ ಕೆ.ಕೆ.ಆರ್.ಡಿ.ಬಿ. ಸಭಾಂಗಣದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೆ.16 ರಂದು ಯಡ್ರಾಮಿಯಲ್ಲಿ ನಡೆಯುವ ಕೆ.ಕೆ.ಆರ್.ಡಿ.ಬಿ ಮಂಡಳಿ ಅನುದಾನದ ಪ್ರಜಾ ಸೌಧ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಅಡಿಗಲ್ಲು ನೆರವೇರಿಸಲಿದ್ದು, ಪ್ರದೇಶದ ಸಚಿವರು, ಶಾಸಕರು ಭಾಗವಹಿಸುವುದರಿಂದ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಬೇಕು. ಗಣ್ಯರ ಭದ್ರತೆಗೆ ಅಗತ್ಯ ಪೊಲೀಸ್ ಬಂದೋಬಸ್ತ್ ಒದಗಿಸಬೇಕು ಎಂದರು.

ಸೆಪ್ಟೆಂಬರ್ 17ರ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಮಂಡಳಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಕೆ.ಕೆ.ಆರ್.ಡಿ.ಬಿ. ನೆರವಿನ ಆಕ್ಷರ ಆವಿಷ್ಕಾರ, ಆರೋಗ್ಯ ಆವಿಷ್ಕಾರ, ಅರಣ್ಯ ಆವಿಷ್ಕಾರ, ಪ್ರಜಾ ಸೌಧ ಹೀಗೆ ಸುಮಾರು 11 ವಿಷಯಗಳ ಮೇಲೆ ವಿವಿಧ ಇಲಾಖೆಗಳು 11 ಸ್ಥಬ್ದಚಿತ್ರಗಳು ಪ್ರದರ್ಶಿಸಬೇಕು. ಇದಲ್ಲದೆ ವಿವಿಧ ಸರ್ಕಾರಿ ಸೌಲಭ್ಯ ವಿತರಿಸುವ ಕಾರ್ಯಕ್ರಮ ಸಹ ಆಯೋಜಿಸಬೇಕೆಂದು ನಳಿನ್ ಅತುಲ್ ಅಧಿಕಾರಿಗಳಿಗೆ ನಿರ್ದೇಶನ ಎಂದರು.

 

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಭಾಗವಾಗಿ ಕಲಬುರಗಿ ನಗರದಲ್ಲಿ ವಾಕ್‌ಥಾನ್, ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮ ಆಯೋಜಿಸಬೇಕು. ಈ ಕುರಿತು ಚಿತ್ರಕಲಾ ಪರಿಷತ್ ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ಇನ್ನು ಹೈದ್ರಾಬಾದ ಕರ್ನಾಟಕ ವಿಮೋಚನೆ ವಿಷಯನ್ನಾಧಾರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮುಂದಾಳತ್ವದಲ್ಲಿ ನಡೆಯಬೇಕು ಎಂದು ನಳಿನ್ ಅತುಲ್ ತಿಳಿಸಿದರು.

 

ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಐತಿಹಾಸಿಕ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪ್ರವಾಸಿ ತಾಣಗಳನ್ನು ಬಿಂಬಿಸುವ ಎರಡು ದಿನಗಳ ಕಾಲ ಮಾಹಿತಿ ನೀಡುವ ಡಿಜಿಟಲ್ ಮಾಹಿತಿ ಮಳಿಗೆ ಮತ್ತು ವಸ್ತು ಪ್ರದರ್ಶನ ಮಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ಆಯೋಜಿಸಬೇಕು. ಪ್ರತ್ಯೇಕವಾಗಿ ಜಿಲ್ಲಾವಾರು ಮಳಿಗೆ ಸ್ಥಾಪಿಸುವುದರ ಜೊತೆಗೆ ಅದರ ಮಾಹಿತಿ ನೀಡುವ ಧ್ವನಿವರ್ಧಕ ವ್ಯವಸ್ಥೆ ಸಹ ಏರ್ಪಾಡು ಮಾಡಬೇಕು ಎಂದರು.

 

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಡಿ.ಸಿ.ಪಿ ಕನಿಕಾ ಸಿಕ್ರಿವಾಲ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಹೆಚ್ಚುವರಿ ಎಸ್.ಪಿ.ಮಹೇಶ ಮೇಘಣ್ಣನವರ್, ಕೆ.ಕೆ.ಆರ್.ಟಿ.ಸಿ. ಸಂಸ್ಥೆಯ ಮುಖ್ಯ ಸಂಚಾರಿ ಅಧಿಕಾರಿ ಸಂತೋಷಕುಮಾರ, ಮಂಡಳಿಯ ಉಪ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಅಪರ ನಿರ್ದೇಶಕಿ ಪ್ರವೀಣಪ್ರಿಯಾ ಡೇವಿಡ್, ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತ ಅಮೀನ್ ಮುಕ್ತಾರ, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕ ಡಾ.ಎಸ್.ತಿಪ್ಪೆಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಜಗದೀಶ್ವರಿ ನಾಸಿ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...