ಕಲಬುರಗಿ| ಬೆಳೆ ಹಾನಿಯಾಗಿರುವ ಪ್ರತಿ ಎಕರೆಗೆ 20 ಸಾವಿರ ಪರಿಹಾರಕ್ಕೆ ವೀರ ಕನ್ನಡಿಗರ ಸೇನೆ ಆಗ್ರಹ

Date:

Share post:

ಕಲಬುರಗಿ: ಮಳೆಯಿಂದ ಬೆಳೆ ನಷ್ಟಕ್ಕೆ ತುತ್ತಾಗಿರುವ ರೈತರಿಗೆ ಶೀಘ್ರವೇ ಪ್ರತಿ ಎಕರೆಗೆ 20,000 ಪರಿಹಾರ ನೀಡಬೇಕೆಂದು ಆಗ್ರಹಿಸಿ, ವೀರ ಕನ್ನಡಿಗರ ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟಿಸಿ, ಡಿ.ಸಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಅತಿವೃಷ್ಟಿಯಾಗಿ ರೈತರು ಬೆಳೆದಿರುವ ಬೆಳೆಗಳು ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ, ಏನು ಮಾಡಬೇಕೆಂದು ತಿಳಿಯದೆ ರೈತರು ಕಂಗಾಲಾಗಿದ್ದಾರೆ. ಕೂಡಲೇ ಸರ್ಕಾರ ರೈತರ ಪರವಾಗಿ ನಿಂತು ಪರಿಹಾರ ಘೋಷಣೆ ಮಾಡುವಲ್ಲಿ ನಿರತರಾಗಬೇಕೆಂದು ಸಂಘಟನೆಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

 

ನಮ್ಮ ಪ್ರದೇಶದಲ್ಲಿ ಬೆಳೆದಿರುವ ಹೆಸರು, ಉದ್ದು, ಸಜ್ಜೆ, ಹಾಗೂ ತೊಗರಿ ಬೆಳೆಗಳು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಕೊಳೆತು ಹೋಗಿವೆ. ಹೀಗಾಗಿ ಅತಿಯಾದ ಮಳೆಯಿಂದ ಸಂಕಷ್ಟ ಅನುಭವಿಸಿದ ರೈತರಿಗೆ ಪರಿಹಾರ ಘೋಷಿಸಲಿ ಎಂದು ಒತ್ತಾಯಿಸಿದ್ದಾರೆ.

 

ಇದೇ ಸಂಧರ್ಭದಲ್ಲಿ ರಾಜ್ಯಾಧ್ಯಕ್ಷರಾದ ಅಮೃತ ಪಾಟೀಲ ಸಿರನೂರ ಹಾಗೂ ರವಿ ಒಂಟಿ, ವಿಠಲ ಕುಸಾಳೆ, ಉಮೇಶ ಸಿಂಗೆ, ಸೋಮಶೇಖರ ಗಡಿ ನಿಂಗಳಿ, ಗೋಪಾಲರಾವ, ಸಚಿನಕುಮಾರ, ಎಮ್.ಬಿ.ಪಾಟೀಲ,ಹಣಮಂತ ಇಂಜಿಹಳ್ಳಿ, ಅಶೋಕ ಬೀರನಳ್ಳಿ, ವಿಠಲ ಇಂಜಹಳ್ಳಿ, ಮಲ್ಲಿಕಾರ್ಜುನ ಮಠ, ಶಿವಾನಂದ ಚಿಕ್ಕಾಣಿ, ಪ್ರಶಾಂತ ಬಾಚನಳ್ಳಿ, ಅಣವೀರ ಬಿರಾದಾರ, ಸುಧೀರ ನವನಳ್ಳಿ, ಮಾಂತಗೌಡ ಹುಗಾರ, ಮಂಜುನಾಥ, ಲಕ್ಷ್ಮೀಕಾಂತ ಸಿಮನರಾಜ, ಹಣಮಂತ ಭಜಂತ್ರಿ, ಉದಯಕುಮಾರ, ಶ್ರವಣಕುಮಾರ, ಮಲ್ಲಿನಾಥ, ಸೋಮಾ, ಭಾಗಮ್ಮ ಚೌಧರಿ ಸೇರಿದಂತೆ ಮತ್ತಿತರರು ಇದ್ದರು

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...