ಕಲಬುರಗಿ| ಸೆಪ್ಟೆಂಬರ್ 6 ರಂದು ಆಳಂದ ನೂತನ ಬಸ್ ನಿಲ್ದಾಣದ ಶಂಕುಸ್ಥಾಪನೆ

Date:

Share post:

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಆಳಂದ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಬಸ್ ನಿಲ್ದಾಣದ ನಿರ್ಮಾಣ ಕಾಮಗಾರಿಗೆ ಸೆಪ್ಟೆಂಬರ್ 6 ರಂದು ಶನಿವಾರ ಮಧ್ಯಾಹ್ನ 1 ಗಂಟೆಗೆ ಆಳಂದ ಕೇಂದ್ರ ಬಸ್ ನಿಲ್ದಾಣದಲ್ಲಿ ರಾಜ್ಯದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಶಂಕುಸ್ಥಾಪನೆ ನೆರವೇರಿಸಿ, ನಂತರ ಆಳಂದ ವೀರಶೈವ ಲಿಂಗಾಯತ ಭವನದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುವರು.

 

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ಹಾಗೂ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಗೌರವ ಉಪಸ್ಥಿತಿವಹಿಸುವರು. ರಾಜ್ಯದ ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವರಾದ ಬೈರತಿ ಸುರೇಶ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.

 

ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ ಹಾಗೂ ಕರ್ನಾಟಕ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

 

ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಬೀದರ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ತಿಮ್ಮಣ್ಣಪ್ಪ ಕಮಕನೂರ, ಡಾ. ತಳವಾರ ಸಾಬಣ್ಣ, ಜಗದೇವ ಗುತ್ತೇದಾರ್, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಕರ್ನಾಟಕ ರಾಜ್ಯ ವಕ್ಪ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರಿ, ಆಳಂದ ಪುರಸಭೆ ಅಧ್ಯಕ್ಷೆ ಫಿರ್ದೊಸ್ ಅನ್ಸಾರಿ ಅತಿಥಿಗಳಾಗಿ ಪಾಲ್ಗೊಳ್ಳುವರು.

 

ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ, ಬೆಂಗಳೂರಿನ ನಗರ ಭೂ ಸಾರಿಗೆ ನಿರ್ದೆಶನಾಲಯದ ಆಯುಕ್ತ ದೀಪಾ ಚೋಳನ್, ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಬಿ. ಸುಶೀಲಾ, ಮುಖ್ಯ ಕಾಮಗಾರಿ ಅಭಿಯಂತರ ಚೆನ್ನಣ್ಣ ಬೋರಯ್ಯ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಲಬುರಗಿ ವಿಭಾಗ-2ರ ವಿಭಾಗೀಯ ನಿಯಂತ್ರಣಾಧಿಕಾರಿ ಸುನಿಲ್ ಕುಮಾರ ಚಂದರಗಿ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...