ಕಲಬುರಗಿ| ಹೃದಯಾಘಾತದಿಂದ ಹೆಡ್ ಕಾಸ್ಟೆಬಲ್ ಸಾವು!

Date:

Share post:

ಕಲಬುರಗಿ: ಕರ್ತವ್ಯನಿರತ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೇಡಂ ತಾಲ್ಲೂಕಿನಲ್ಲಿ ನಡೆದಿದೆ.

ಕಾಳಗಿ ತಾಲ್ಲೂಕಿನ ಲಕ್ಷ್ಮಣ ನಾಯಕ ತಾಂಡಾದ ನಿವಾಸಿ, ಸೇಡಂ ತಾಲ್ಲೂಕಿನ ಮಳಖೇಡ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕರ್ತವ್ಯ ನಿರ್ವಸುತ್ತಿದ್ದ ಮನೋಹರ ‌ಪವಾರ್(46) ಮೃತ ದುರ್ದೈವಿ ಎಂದು ತಿಳಿದುಬಂದಿದೆ.

ಗುರುವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿ, ನೋಟಿಸ್ ಕೊಡುವುದಕ್ಕಾಗಿ ಸೇಡಂ ತಹಸೀಲ್ದಾರ್ ಕಚೇರಿಯತ್ತ ಹೋಗುತ್ತಿದ್ದಾಗ ಹೃದಯಾಘಾತ ಸಂಭವಿಸಿದೆ, ಕೂಡಲೇ ಅವರನ್ನು ಅಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಆ್ಯಂಬುಲೆನ್ಸನಲ್ಲಿ ಕಲಬುರಗಿ ಆಸ್ಪತ್ರೆಗೆ ಕರೆತರುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

23 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮನೋಹರ ‌ಪವಾರ್ ಅವರ ಅಂತ್ಯಕ್ರಿಯೆ ಲಕ್ಷ್ಮಣ ನಾಯಕ ತಾಂಡಾದಲ್ಲಿ ಶುಕ್ರವಾರ ನೆರವೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...