ಕಲಬುರಗಿ| ಸ್ಪರ್ಧಾರ್ಥಿಗಳೇ ಗಮನಿಸಿ; ಸ್ಪರ್ಧಾತ್ಮಕ ಪರೀಕ್ಷೆ ದಿಢೀರ್ ರದ್ದು

Date:

Share post:

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಸಂಖ್ಯೆ:ಸಂಖ್ಯೆ ಪಿಎಸಿ 1 ಆರ್‌ಟಿಬಿ-4/2024 ದಿ.20-09-2024 ಮತ್ತು ತಿದ್ದುಪಡಿ ಅಧಿಸೂಚನೆ ದಿನಾಂಕ 31-12-2024ರನ್ವಯ ಹೈ.ಕ ವೃಂದದಡಿ ಅಧಿಸೂಚಿಸಲಾಗಿದ್ದ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 42 ಹುದ್ದೆಗಳು ಹಾಗೂ ಸಹಾಯಕ ಕೃಷಿ ಅಧಿಕಾರಿ 231 ಹುದ್ದೆಗಳಿಗೆ ಇದೇ ಸೆಪ್ಟೆಂಬರ್ 6 ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸೆಪ್ಟೆಂಬರ್ 7 ಮತ್ತು ಅಕ್ಟೋಬರ್ 4 ರಂದು ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ದಿ.04-09-2025 ರಂದು ಸರ್ಕಾರದ ಹೊರಡಿಸಿರುವ ಸುತ್ತೋಲೆಯಲ್ಲಿ ದಿ.28.10.2024ರ ಹಿಂದೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ದಿ.28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಯಾವುದಾದರೂ ತಿದ್ದುಪಡಿ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಅಂತಹ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನು ಸಹ ರದ್ದುಗೊಳಿಸಿ, ಪರಿಶಿಷ್ಟಜಾತಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಬೇಕೆಂದು ಸೂಚಿಸಲಾಗಿರುವುದರಿಂದ ಮೇಲ್ಕಂಡ ಕೃಷಿ ಇಲಾಖೆಯಲ್ಲಿನ ಹೈ.ಕ.ವೃಂದದ ಪರೀಕ್ಷೆಗಳನ್ನು ರದ್ದುಪಡಿಸಿದೆ ಎಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...