ಕಲಬುರಗಿ| ಗುಲ್ಬರ್ಗಾ ವಿವಿಯ ಕುಲಪತಿಯಾಗಿ ಡಾ.ಶಶಿಕಾಂತ ಉಡಿಕೇರಿ ನೇಮಕ

Date:

Share post:

ಕಲಬುರಗಿ: ನಗರದ ಹೊರವಲಯದಲ್ಲಿರುವ ಗುಲ್ಬರ್ಗಾ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ.ಶಶಿಕಾಂತ ಎಸ್.ಉಡಿಕೇರಿ ಅವರನ್ನು ನೇಮಕ ಮಾಡಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಬರೋಬ್ಬರಿ 8 ತಿಂಗಳ ಬಳಿಕ ವಿವಿಗೆ ಖಾಯಂ ಕುಲಪತಿಗಳನ್ನಾಗಿ ನೇಮಿಸಿ ಆದೇಶಿಸಲಾಗಿದೆ.

 

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನವರಾದ ಉಡಿಕೇರಿ ಅವರು ಕೆಲ ಕಾಲ ಬಳ್ಳಾರಿ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾಗಿ ಕೆಲಸ ಮಾಡಿದ್ದರು.

 

ಈ ಹಿಂದೆ ಕುಲಪತಿಯಾಗಿದ್ದ ಪ್ರೊ.ದಯಾನಂದ ಅಗಸರ ಅವರ ಅಧಿಕಾರವಧಿ ಜನವರಿಯಲ್ಲಿ ಮುಗಿದಿತ್ತು. ಇದಾದ ಬಳಿಕ ವಿವಿಯ ಪ್ರಭಾರ ಕುಲಪತಿಯಾಗಿ ಪ್ರೊ.ಗೂರು ಶ್ರೀರಾಮುಲು, ಪ್ರೊ.ಹೂವಿನಬಾವಿ ಬಾಬಣ್ಣ, ಪ್ರೊ.ಅಬ್ದುಲ್ ರಬ್ ಉಸ್ತಾದ್ ಅವರು ನಿಭಾಯಿಸಿದ್ದರು.

ಇದೀಗ ಹಲವು ತಿಂಗಳ ಬಳಿಕ ಖಾಯಂ ಕುಲಪತಿಗಳಾಗಿ ನೇಮಕವಾಗಿರುವ ಡಾ.ಶಶಿಕಾಂತ ಉಡಿಕೇರಿ ಅವರ ಅಧಿಕಾರವಧಿ ಮುಂದಿನ ನಾಲ್ಕು ವರ್ಷಗಳ ಕಾಲ ಇರಲಿದೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...