ಕಲಬುರಗಿ: ಪ್ರಸಕ್ತ 2025-26ನೇ ಸಾಲಿಗೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2025ರ ಅಕ್ಟೋಬರ್ 4 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ https://bcwd.karnataka.gov.in/ ವೆಬ್‍ಸೈಟ್, ಸಹಾಯವಾಣಿ 8050770004 ಮತ್ತು 8050770005, ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ವಿಳಾಸವನ್ನು ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಕೋರಲಾಗಿದೆ.


