ಕಲಬುರಗಿ| ಬಿಜೆಪಿಗರು ತಮ್ಮ ಮಕ್ಕಳನ್ನು ವಾಪಸ್ ಕರೆಸಿ, ಮದ್ದೂರು ಚಲೋ ಮಾಡಲಿ: ಪ್ರಿಯಾಂಕ್ ಖರ್ಗೆ ಸವಾಲ್

Date:

Share post:

ಕಲಬುರಗಿ: ಮದ್ದೂರು ಚಲೋ‌ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ದ ತೀವ್ರ ವಾಗ್ಧಾಳಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ವಿದೇಶದಲ್ಲಿರುವ ತಮ್ಮ ತಮ್ಮ ಮಕ್ಕಳನ್ನು ವಾಪಸ್ ಕರೆಸಿ ಮದ್ದೂರಿನ ಬೀದಿಗಿಳಿಸಲಿ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿ ನಾಯಕರು ಈಗ ಮಂಗಳೂರಿನಿಂದ ಮದ್ದೂರಿಗೆ ಶಿಫ್ಟ್ ಆಗಿದ್ದಾರೆ ಎಂದು ಟೀಕಿಸಿದ ಸಚಿವರು ಅವರಿಗೆ ಈಗ ಮಾಡಲು ಏನೂ ಕೆಲಸವಿಲ್ಲ. ಹಾಗಾಗಿ ಇದೆಲ್ಲ ಮಾಡುತ್ತಿದ್ದಾರೆ. ಮದ್ದೂರು ಘಟನೆಗೆ ಸಂಬಂಧಿಸಿದಂತೆ 22 ಜನರನ್ನು ಅರೆಸ್ಟ್ ಮಾಡಲಾಗಿದೆ. ತನಿಖೆ ನಡೆಯುತ್ತಿದೆ. ಶಾಂತಿ ಸಭೆ ಕರೆಯಲಾಗಿತ್ತು. ಆ ಸಭೆಯಲ್ಲಿ ಯಾಕೆ‌ ಬಿಜೆಪಿ ನಾಯಕರು ಭಾಗವಹಿಸಲಿಲ್ಲ ? ಎಂದು ಪ್ರಶ್ನಿಸಿದರು.

ಭದ್ರಾವತಿ ಶಾಸಕ ಸಂಗಮೇಶ್ ಹೇಳಿಕೆ‌ 20 ವರ್ಷ ಹಿಂದಿನದು ಎಂದು ಅವರೇ ಹೇಳಿದ್ದಾರೆ. ಸಂಗಮೇಶ್ ಬಗ್ಗೆ ಮಾತಮಾಡುವ ಬಿಜೆಪಿ ನಾಯಕರು ಈ ಹಿಂದೆ ಇದೇ ತರ ಹೇಳಿಕೆ ನೀಡಿದ್ದ ದೇವೇಗೌಡ ಹಾಗೂ ಕುಮಾರಸ್ವಾಮಿ ಬಗ್ಗೆ ಏನು ಹೇಳುತ್ತಾರೆ ಎಂದು ತಿರುಗೇಟು ನೀಡಿದರು.

ಕಡಗಂಚಿಯ ಕೇಂದ್ರೀಯ ವಿದ್ಯಾಲಯ ಆರ್ ಎಸ್ ಎಸ್ ಶಾಖಾ ಕಚೇರಿಯಾಗಿದೆ. ವಿವಿ ಕಟ್ಟಲು ಜಾಗ ಕೊಟ್ಟಿರುವುದು ನಾವು, ಆದರೆ, ನಮ್ಮನ್ನೇ ವಿವಿ ವ್ಯಾಪ್ತಿಯಿಂದ ಹೊರಗಡೆ ಇಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...