ಕಲಬುರಗಿ| ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ; ಯಾವುದೇ ಪದವಿ ಪಡೆದರೂ ಕೆಲಸ ಪಕ್ಕಾ!

Date:

Share post:

ಕಲಬುರಗಿ: ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಸೆಪ್ಟೆಂಬರ್ 12ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಕೆಜಿಪಿ ಗ್ರೂಪ್ ಆಫ್ ಕಂಪನಿಯಲ್ಲಿ ಬ್ರ್ಯಾಂಚ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಬ್ರ್ಯಾಂಚ್ ಮ್ಯಾನೇಜರ್ ಹುದ್ದೆಗಳಿಗೆ ಯಾವುದೇ ಪದವಿ/ ಎಮ್.ಬಿ.ಎ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು. ಶೋರೂಮ್ ಎಕ್ಸಿಕ್ಯೂಟಿವ್, ಸೇಲ್ಸ್ ಎಕ್ಸಿಕ್ಯೂಟಿವ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್ ಮತ್ತು ಮಾರ್ಕೇಟಿಂಗ್ ಇನ್‍ಚಾರ್ಜ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಆಫೀಸ್ ಬಾಯ್ ಹುದ್ದೆಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ನಿಸಾರ ಕಲೆಕ್ಷನ್‍ದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡಟಾ) ಭಾವಚಿತ್ರಗಳು ಹಾಗೂ ಆಧಾರ್‍ಕಾರ್ಡ್‍ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ನೇರ ಸಂರ್ದಶನದಲ್ಲ್ಲಿ ಭಾಗವಹಿಸಬೇಕು. ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 9986601040 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...