ಕಲಬುರಗಿ| ಆಳಂದನಲ್ಲಿ ಲಘು ಭೂಕಂಪನ; ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು

Date:

Share post:

ಕಲಬುರಗಿ: ಆಳಂದ ತಾಲ್ಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ 8.17 ಗಂಟೆಯ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನವಾಗಿದೆ ಎಂದು ಆಳಂದ ತಾಲ್ಲೂಕಿನ ತಹಸೀಲ್ದಾರ್ ಅವರು ತಿಳಿಸಿದ್ದಾರೆ.

ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆ ದಾಖಲಾಗಿದ್ದು, ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ದೌಡಾಯಿಸಿದ್ದಾರೆ.

ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತುರ್ತು ಪತ್ರಿಕಾ ಹೇಳಿಕೆ ನೀಡಿದ್ದು, ಕರ್ನಾಟಕ ರಾಜ್ಯ  ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದೊಂದಿಗೆ ಸಂಪರ್ಕದಲ್ಲಿದ್ದೇನೆ. ಸ್ಥಳಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ತಹಸೀಲ್ದಾರ, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಭೂಕಂಪನವು ಸಣ್ಣ ಪ್ರಮಾಣದ್ದಾಗಿದ್ದು, ಸಾರ್ವಜನಿಕರು ಹಾಗೂ‌ ಚಿಂಚನಸೂರು ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯ ಗ್ರಾಮಸ್ಥರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು‌ ಮನವಿ ಮಾಡಿದ್ದಾರೆ.

 

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...