ಕಲಬುರಗಿ| ರಸ್ತೆ ಅಪಘಾತ & ಆಕಸ್ಮಿಕ ಪ್ರಕರಣಗಳಿದ್ದಾಗ ಮುಂಗಡ ಹಣಕ್ಕೆ ಒತ್ತಾಯಿಸದೆ ಆಸ್ಪತ್ರೆಗಳು ಮೊದಲು ಚಿಕಿತ್ಸೆ ನೀಡಬೇಕು: ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚನೆ

Date:

Share post:

ಕಲಬುರಗಿ: ರಸ್ತೆ ಅಪಘಾತ ಪ್ರಕರಣಗಳು ಸೇರಿದಂತೆ ಆಕಸ್ಮಿತ ಅಥವಾ ಪ್ರೇರಿತ ಸುಡುವಿಕೆ, ಪ್ರೇರಿತ ಗುಂಡೆಟುಗಳು, ವಿಷಪ್ರಾಶನ, ಕ್ರಿಮಿನಲ್ ಹಲ್ಲೆ ಹಾಗೂ ವೈದ್ಯಕೀಯ ಕಾನೂನು ಪ್ರಕರಣಗಳು ಸಂಭವಿಸಿದ ಸಂದರ್ಭದಲ್ಲಿ ಚಿಕಿತ್ಸೆಗೆ ಬರುವ ರೋಗಿಗೆ ಮುಂಗಡ ಹಣ ಕಟ್ಟುವಂತೆ ಒತ್ತಾಯಿಸದೆ ಆದ್ಯತೆ ಮೇಲೆ ಮೊದಲು ಚಿಕಿತ್ಸೆ ನೀಡಬೇಕು ಎಂದು ಕೆ.ಪಿ.ಎಮ್.ಇ. ಕಾಯ್ದೆಯಡಿ ಜಿಲ್ಲೆಯಲ್ಲಿ ನೋಂದಾಯಿತ ಎಲ್ಲಾ ಖಾಸಗಿ ಆರೋಗ್ಯ ಸಂಸ್ಥೆಗಳಿಗೆ ಡಿ.ಸಿಮ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದ್ದಾರೆ.

ಒಂದು ವೇಳೆ ಈ ನಿಯಮವನ್ನು ಉಲ್ಲಂಘಿಸಿದರೆ ಅಂತಹ ಖಾಸಗಿ ಆರೋಗ್ಯ ಸಂಸ್ಥೆಗಳ ಮೇಲೆ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ 2007ರ ಸೆಕ್ಷನ್ 19(5) ಅಡಿಯಲ್ಲಿ 1 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುವುದು ಎಂದು ಕೆ.ಪಿ.ಎಂ.ಇ.ಕಾಯ್ದೆ ನೋಂದಣಿ ಮತ್ತು ಕುಂದು ಕೊರತೆ ಪ್ರಾಧಿಕಾರದ ಅಧ್ಯಕ್ಷರಾಗಿರುವ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಹಣಕ್ಕೆ ಒತ್ತಾಯಿಸಿ ಚಿಕಿತ್ಸೆ ನೀಡದ ಪ್ರಕರಣಗಳಲ್ಲಿ ಈ ಕುರಿತಂತೆ ಸಾರ್ವಜನಿಕರು ತಮ್ಮ ದೂರನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...