ಕಲಬುರಗಿ| ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ; ಲೋಕಾಯುಕ್ತ ಪೊಲೀಸರಿಂದ ದಿಢೀರ್ ದಾಳಿ

Date:

Share post:

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪದ ಮೇರೆಗೆ ಕಲಬುರಗಿ ಲೋಕಾಯುಕ್ತ ಪೊಲೀಸರು ಪಾಲಿಕೆ ಸೇರಿದಂತೆ ವಲಯ ಪಾಲಿಕೆ, ಜೆರಾಕ್ಸ್ ಅಂಗಡಿಗಳಿಗೆ ಮೇಲೆ ದಿಢೀರ್ ದಾಳಿ ನಡೆಸಿ, ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಕಲಬುರಗಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ 80 ಅಧಿಕಾರಿಗಳನ್ನು ಒಳಗೊಂಡ 7 ವಿಶೇಷ ತಂಡಗಳ ನೇತೃತ್ವದಲ್ಲಿ ವಲಯ ಆಯುಕ್ತರು ಮಹಾನಗರ ಪಾಲಿಕೆ ಕಲಬುರಗಿ 1, ವಲಯ ಆಯುಕ್ತರು ಮಹಾನಗರ ಪಾಲಿಕೆ ಕಲಬುರಗಿ 2, ವಲಯ ಆಯುಕ್ತರು ಮಹಾನಗರ ಪಾಲಿಕೆ ಕಲಬುರಗಿ 3, ಮಿನಿ ವಿಧಾನಸೌಧ ರಸ್ತೆಯಲ್ಲಿರುವ ಸ್ನೇಹ ಬಿಲ್ಡರ್ಸ್ ರಿಯಲ್ ಸ್ಟೇಟ್ ಸೆಂಟರ್, ಜಗತ್ ವೃತ್ತದ ಸಮೀಪದ ಎಸ್. ಬಿ .ಬಿಲ್ಡಿಂಗ್ ಪ್ಲ್ಯಾನ್, ಪಾಲಿಕೆಯ ಕಟ್ಟಡದ ಆವರಣದ ಜೆರಾಕ್ಸ್ ಮತ್ತು ಡಿಟಿಪಿ ಸೆಂಟರ್, ಸೇರಿದಂತೆ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿ, ಸೂಕ್ತ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ದಾಳಿಯ ವೇಳೆಯಲ್ಲಿ ಮಹಾನಗರ ಪಾಲಿಕೆಯ ವಲಯ ಆಯುಕ್ತರು, ಸರ್ಕಾರಿ ಪಂಚರು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಶೋಧನೆ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Share post:

spot_imgspot_img

Popular

More like this
Related

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...

ಕಲಬುರಗಿ: ಗುಂಡಿನ ದಾಳಿ; ವ್ಯಕ್ತಿಯ ಭೀಕರ ಕೊಲೆ

ಕಲಬುರಗಿ: ಬಲರಾಮ ಚೌಕ್ ನಿಂದ ವಾಡಿ ಪಟ್ಟಣಕ್ಕೆ ಸ್ಕೂಟಿ ಮೇಲೆ ಹೋಗುತ್ತಿದ್ದ...

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...