ಕಲಬುರಗಿ| ಯಲ್ಲಮ್ಮ ದೇವಸ್ಥಾನದಲ್ಲಿ ಕಳ್ಳತನ; ಸ್ಥಳಕ್ಕೆ ಪೊಲೀಸರು ಭೇಟಿ

Date:

Share post:

ಕಲಬುರಗಿ: ಚಿತ್ತಾಪುರ ಪಟ್ಟಣದ ಬಾಹರಪೇಟ್ ಸಮೀಪದ ಕೊತಲಾಪೂರ ಯಲ್ಲಮ್ಮ ದೇವಸ್ಥಾನದ ಬಾಗಿಲಿನ ಕೀಲಿ ಕೈ ಮುರಿದು ಒಳಗಡೆಯ ದೇವಿಯ ಬೆಳ್ಳಿ ಮೂರ್ತಿಯ ಎರಡು ಕೈಗಳನ್ನು ಕಟ್ ಮಾಡಿ, ಬೆಳ್ಳಿ ಕಳ್ಳತನ ಮಾಡಿರುವ ಘಟನೆ ನಡೆದಿದೆ.

ನವರಾತ್ರಿ ನಿಮಿತ್ತ ದೇವಸ್ಥಾನಕ್ಕೆ ಸುಣ್ಣ ಬಣ್ಣ ಮಾಡಿ ಅಲಂಕಾರ ಕಾರ್ಯ ನಡೆಯುತ್ತಿದೆ ಅದರಂತೆ ಮಂಗಳವಾರ ಕೊನೆ ಹಂತಕ್ಕೆ ತಲುಪಿತ್ತು. ಉಳಿದ ಕಾರ್ಯ ನಾಳೆ ಮಾಡಿದರಾಯಿತು ಎಂದು ದೇವಸ್ಥಾನದ ಗೇಟ್ ಮುಚ್ಚಿ ಕೀಲಿಕೈ ಹಾಕಿ ಹೋಗಲಾಗಿತ್ತು. ಎಂದಿನಂತೆ ಬುಧವಾರ ಬೆಳಗ್ಗೆ ದೇವಿಯ ಪೂಜೆ ಕಾರ್ಯಕ್ಕೆ ಅರ್ಚಕ ಮಂಜುನಾಥ ಆಗಮಿಸಿದಾಗ ದೇವಸ್ಥಾನ ಗೇಟ್ ಗೆ ಹಾಕಿದ ಕೀಲಿಕೈ ಮುರಿದು ಒಳಗಡೆ ಇರುವ ದೇವಿಯ ಬೆಳ್ಳಿ ಮೂರ್ತಿಯ ಎರಡು ಕೈಗಳನ್ನು ಕಟ್ ಮಾಡಿ ಕಳ್ಳತನ ಆಗಿರುವುದು ಕಂಡುಬಂದಿದೆ. ಅಲ್ಲದೇ ಬೆಳ್ಳಿಯ ಕಣ್ಣು ಬಿಟ್ಟು ಹಾಗೂ ಪಾದುಕೆ, ತಟ್ಟೆ ಸಹ ಕಳ್ಳತನವಾಗಿದ್ದು, ದೇವಿಯ ಮೂರ್ತಿಯನ್ನೇ ಕಳ್ಳತನ ಮಾಡುವ ಪ್ರಯತ್ನ ನಡೆದಿದೆ ಎಂದು ತಿಳಿದು ಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಪಿಎಸ್‌ಐ ಶ್ರೀಶೈಲ್ ಅಂಬಾಟಿ, ರವಿಕುಮಾರ, ಬಸವರಾಜ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...