ಕಲಬುರಗಿ| ಅಧಿಕಾರಿಗಳಿಗೆ ಮಸಿ ಬಳಿದ ಕರವೇ ಕಾರ್ಯಕರ್ತರು: 11 ಮಂದಿ ಅರೆಸ್ಟ್

Date:

Share post:

ಕಲಬುರಗಿ: ನಗರದ ಕಣ್ಣಿ ಮಾರುಕಟ್ಟೆ ವಾಣಿಜ್ಯ ಮಳಿಗೆಯ ಕನ್ನಡ ಫಲಕ ತೆಗೆಯುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಲೋಕೋಪಯೋಗಿ ಎಂಜಿನಿಯರ್ ಅಮೀನ್ ಮುಕ್ತಾರ್ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಗಂಗಾಧರ ಎಸ್.ಮಾಳಗಿ ಮೇಲೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕಪ್ಪು ಮಸಿ ಬಳಿದಿರುವ ಪ್ರಕರಣಕ್ಕೆ ಸಂಬoಧಿಸಿದoತೆ ನಗರದ ಸ್ಟೇಷನ್ ಬಜಾರ್ ಠಾಣೆಯಲ್ಲಿ 20 ಕ್ಕೂ ಹೆಚ್ಚು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಕಣ್ಣಿ ಮಾರುಕಟ್ಟೆ ಮಳಿಗೆಗೆ ಅಳವಡಿಸಿರುವ ಕನ್ನಡ ನಾಮಫಲಕ ತೆರವುಗೊಳಿಸುತ್ತಿರುವುದನ್ನು ಗಮನಿಸಿದ ಕರವೇ ಕಾರ್ಯಕರ್ತರು ದಿಢೀರನೇ ಕುಡಾ ಕಚೇರಿಗೆ ಆಗಮಿಸಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ.ಎಸ್.ಮಾಳಗಿ ಮತ್ತು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಅಮೀನ್ ಮುಕ್ತಾರ್ ಅವರಿಗೆ ಕಪ್ಪು ಮಸಿ ಬಳಿದು ಆಕ್ರೋಶ ಹೊರ ಹಾಕಿದರು.

ಈ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಆಗಮಿಸಿದ ಸ್ಟೇಷನ್ ಬಜಾರ ಠಾಣೆಯ ಪೊಲೀಸರು ಈ ಪ್ರಕರಣಕ್ಕೆ ಸಂಬoಧಿಸಿದoತೆ ಸಂಘಟನೆಯ ಪ್ರಮುಖರಾದ ಆನಂದ ದೊಡ್ಡಮನಿ (32), ರವೀಂದ್ರ ಸರಡಗಿ (30), ರಾಜು ಮಠಪತಿ (25), ಪೃಥ್ವಿ (18), ಸಚಿನ ಲೋಕನಿ (25), ಶಾಹಿಲ ಚವ್ಹಾಣ್ (24), ಅಪ್ಪಾರಾವ ಕೆಟರಿ (38), ವಿಲಾಸ ರಾಠೋಡ (30), ಚೆನ್ನವೀರ ಬಿರಾದಾರ (24), ಪ್ರವೀಣ ಕಟ್ಟಿಮನಿ (35) ಮತ್ತು ಮೈತಾಬ್ (53) ಅವರನ್ನು ಬಂಧಿಸಿ, ಅವರ ವಿರುದ್ಧ ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...