ಕಲಬುರಗಿ| ದಸರಾ, ದೀಪಾವಳಿ ಪ್ರಯುಕ್ತ ಕಲಬುರಗಿಯಿಂದ ವಿಶೇಷ ರೈಲುಗಳ ಸಂಚಾರ

Date:

Share post:

ಕಲಬುರಗಿ: ಮುಂಬರುವ ದಸರಾ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಪ್ರಯಾಣಿಕರ ಅನುಕೂಲಕ್ಕಾಗಿ ಕೇಂದ್ರ ರೈಲ್ವೆ ಇಲಾಖೆಯು ಸೊಲ್ಲಾಪುರ ವಿಭಾಗದ ಮೂಲಕ ಕೊಲ್ಹಾಪುರ ಮತ್ತು ಕಲಬುರಗಿ ನಡುವೆ ಕೆಳಕಂಡ ದಿನಾಂಕಗಳoದು 116 ಟ್ರಿಪ್‌ಗಳಲ್ಲಿ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ ಎಂದು ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೊಲ್ಹಾಪುರ-ಕಲಬುರಗಿ ವಿಶೇಷ ರೈಲು: ಕೊಲ್ಹಾಪುರ-ಕಲಬುರಗಿ ವಿಶೇಷ ರೈಲು (ರೈಲು ಸಂಖ್ಯೆ ೦೧೪೫೧) ಇದೇ ಸೆಪ್ಟೆಂಬರ್ 24ರಿಂದ ನವೆಂಬರ್ 30 ರವರೆಗೆ ಪ್ರತಿದಿನ ಬೆಳಿಗ್ಗೆ 6.10 ಕ್ಕೆ ಕೊಲ್ಹಾಪುರದಿಂದ ಹೊರಟು ಅದೇ ದಿನ ಸಂಜೆ 4.10 ಕ್ಕೆ ಕಲಬುರಗಿಗೆ ಆಗಮಿಸಲಿದೆ. ಅದೇ ರೀತಿ ಕಲಬುರಗಿ-ಕೊಲ್ಹಾಪುರ ವಿಶೇಷ ರೈಲು (ರೈಲು ಸಂಖ್ಯೆ ೦೧೪೫೨) ಸೆಪ್ಟೆಂಬರ್ 24 ರಿಂದ ನವೆಂಬರ್ 30 ರವರೆಗೆ ಪ್ರತಿದಿನ (ಶುಕ್ರವಾರ ಹೊರತುಪಡಿಸಿ) 18.10 ಗಂಟೆಗೆ ಕಲಬುರಗಿಯಿಂದ ಹೊರಟು ಮರುದಿನ 5.40 ಗಂಟೆಗೆ ಕೊಲ್ಹಾಪುರ ತಲುಪಲಿದೆ.

ಹೆಚ್ಚಿನ ಮಾಹಿತಿಗಾಗಿ www.irctc.co.in ವೆಬ್‌ಸೈಟ್‌ನ್ನು, ಯು.ಟಿ.ಎಸ್. (uts) ಅಪ್ಲಿಕೇಶನ್‌ದಿಂದ ಹಾಗೂ ಈ ವಿಶೇಷ ರೈಲುಗಳ ನಿಲುಗಡೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ www.enquiry.indianrail.gov.in ಗೆ ವೆಬ್‌ಸೈಟ್‌ದಿಂದ ಅಥವಾ ಎನ್.ಟಿ.ಇ.ಎಸ್. (uts) ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಪಡೆಯಬಹುದಾಗಿದೆ. ಪ್ರಯಾಣಿಕರು ತಪ್ಪದೇ ಟಿಕೇಟ್ ಪಡೆದು ಪ್ರಯಾಣಿಸಬೇಕೆಂದು ರೈಲ್ವೆ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ: ಗುಂಡಿನ ದಾಳಿ; ವ್ಯಕ್ತಿಯ ಭೀಕರ ಕೊಲೆ

ಕಲಬುರಗಿ: ಬಲರಾಮ ಚೌಕ್ ನಿಂದ ವಾಡಿ ಪಟ್ಟಣಕ್ಕೆ ಸ್ಕೂಟಿ ಮೇಲೆ ಹೋಗುತ್ತಿದ್ದ...

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...