ಕಲಬುರಗಿ| ಜಾನುವಾರುಗಳಿಗೆ ಚರ್ಮಗಂಟು ರೋಗ ಹಿನ್ನೆಲೆ: ದನಕರುಗಳಿಗೆ ಲಸಿಕೆ ಕೊಡಿಸಲು ಡಿ.ಸಿ. ಫೌಜಿಯಾ ತರನ್ನುಮ್ ಮನವಿ

Date:

Share post:

ಕಲಬುರಗಿ: ನೆರೆಯ ಮಹಾರಾಷ್ಟ್ರದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದರಿಂದ ಗಡಿ ಭಾಗದಲ್ಲಿರುವ ಜಿಲ್ಲೆಯ ಆಳಂದ, ಅವಜಲಪೂರ ಮತ್ತು ಕಲಬುರಗಿ ತಾಲ್ಲೂಕುಗಳ ಜಾನುವಾರುಗಳಲ್ಲಿಯೂ ಸಹ ಈ ರೋಗದ ಲಕ್ಷಣಗಳು ಹೆಚ್ಚು ಕಂಡುಬರುತ್ತಿದ್ದು, ರೈತರು ಆತಂಕಕ್ಕೆ ಒಳಗಾಗದೆ ದನಕರುಗಳಿಗೆ ಸಮೀಪದ ಪಶು ಕೇಂದ್ರಕ್ಕೆ ಕರೆದುಕೊಂಡು ಹೋಗಿ ಲಸಿಕೆ ಕೊಡಿಸಬೇಕೆಂದು ರೈತಾಪಿ ವರ್ಗದಲ್ಲಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮನವಿ ಮಾಡಿದ್ದಾರೆ.

1 ರಿಂದ 6 ತಿಂಗಳ ಅವಧಿಯ ದನಕರುಗಳಲ್ಲಿ ಈ ಚರ್ಮಗಂಟು ರೋಗವು ವಿಶೇಷವಾಗಿ ಕಂಡುಬರುತ್ತದೆ. ರೋಗ ಪೀಡಿತ ಜಾನುವಾರುಗಳ ಮೈತುಂಬಾ ಸಣ್ಣ ಗಾತ್ರದ ಗುಳ್ಳಿಗಳು ಕಾಣಿಸಿಕೊಂಡು ಜಾನುವಾರುಗಳು ರೋಗದಿಂದ ಬಳಲುತ್ತವೆ. ಚರ್ಮಗಂಟು ರೋಗ (Lumpy Skin Disease) ಒಂದು ವೈರಾಣು ರೋಗವಾಗಿದ್ದು ಒಂದು ಪ್ರಾಣಿದಿಂದ ಇನ್ನೊಂದು ಪ್ರಾಣಿಗೆ ವೇಗವಾಗಿ ಹರಡುತ್ತದೆ. ಹೀಗಾಗಿ ರೋಗಪೀಡಿತ ಜಾನುವಾರುಗಳನ್ನು ಪ್ರತ್ಯೇಕವಾಗಿ ಕಟ್ಟಬೇಕು ಮತ್ತು ತಕ್ಷಣವೇ ಪಶುವೈದ್ಯಕೀಯ ಸಂಸ್ಥೆಗೆ ಭೇಟಿ ನೀಡಿ ಚಿಕಿತ್ಸೆ ಕೊಡಿಸಬೇಕು ಎಂದಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೆ ಚರ್ಮಗಂಟು (LSD) ರೋಗದ ವಿರುದ್ಧ 1 ಲಕ್ಷ ಲಸಿಕೆ ಸಂಗ್ರಹವಿದ್ದು, ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಹಂತ ಹಂತವಾಗಿ ಅದತ್ಯ ಮೇರೆಗೆ ಪಶು ವೈದ್ಯಕೀಯ ತಂಡದೊಂದಿಗೆ ಲಸಿಕೆ ಕಾರ್ಯಕ್ರಮ ಅಯೋಜಿಸಲಾಗುತ್ತದೆ. ರೈತ ಬಾಂಧವರು 1 ತಿಂಗಳ ಮೇಲ್ಪಟ್ಟ ಎಲ್ಲಾ ದನಕರುಗಳಿಗೆ ತಪ್ಪದೇ ಲಸಿಕೆ ಹಾಕಿಸಿಕೊಳ್ಳಬೇಕು. ಇದಕ್ಕಾಗಿ ಪಶು ಸಂಗೋಪನೆ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಡಿ.ಸಿ. ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ವೈದ್ಯಕೀಯ ಸಂಸ್ಥೆಯನ್ನು ಮತ್ತು ತುರ್ತು ಸಂದರ್ಭದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆ ವರೆಗೆ ಜಾನುವಾರುಗಳ ಸಂಚಾರಿ ಚಿಕಿತ್ಸಾ ಘಟಕದ ಉಚಿತ ಸಹಾಯವಾಣಿ ಸಂಖ್ಯೆ 1962 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...