ಕಲಬುರಗಿ| ಕನ್ನಡ ನಾಮಫಲಕ ತೆಗೆದು ಹಾಕಿದ ಅಧಿಕಾರಿಗಳನ್ನು ವಜಾ ಮಾಡುವಂತೆ ಆಗ್ರಹ

Date:

Share post:

ಕಲಬುರಗಿ: ನಗರದಲ್ಲಿ ಕಣ್ಣಿ ಮಾರುಕಟ್ಟೆ ಎಂ.ಎಸ್.ಕೆ. ಮಿಲ್ ಪ್ರದೇಶದಲ್ಲಿ ಕಟ್ಟಡಗಳ ಮೇಲಿದ್ದ ಕನ್ನಡ ನಾಮಫಲಕಗಳನ್ನು ತೆರವುಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ ಕೂಡಲೇ ಮೊದಲು ಕನ್ನಡಕ್ಕೆ ಆದ್ಯತೆ ಕೊಟ್ಟು ಕರ್ನಾಟಕ ಸರ್ಕಾರದ ಆದೇಶದ ವರದಿಯಂತೆ ಶೇ.60% ರಷ್ಟು ಕನ್ನಡದಲ್ಲಿ ನಾಮಫಲಕ ಅಳವಡಿಸಬೇಕೆಂದು ಕರುನಾಡ ವಿಜಯಸೇನೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಕ್ಕೆ ಅವಮಾನ ಮಾಡಿದರೇ ಕನ್ನಡಿಗರಿಗೆ ಅವಮಾನ ಮಾಡಿದಂತೆ ಇಲ್ಲಿಯ ಗಾಳಿ ನೀರು ಅನ್ನ ತಿಂದು ಕನ್ನಡಕ್ಕೆ ಅವಮಾನ ಮಾಡಿದಂಥ ಅಧಿಕಾರಿ ಕನ್ನಡಿಗರ ಭಾವಣೆಗಳಿಗೆ ಧಕ್ಕೆ ತಂದಂತಾಗಿದೆ. ಮೊದಲು ಕನ್ನಡಕ್ಕೆ ಆದ್ಯತೆ ಕೊಡದಂತಹ, ಕನ್ನಡದ ವಿಚಾರವಾಗಿ ಉಡಾಫೆ ಮಾತನ್ನು ಆಡಿದಂತಹ ಅಧಿಕಾರಿಯನ್ನು ಕೂಡಲೇ ವಜಾಗೊಳಿಸಬೇಕು ಮತ್ತು ಕೂಡಲೇ ಕನ್ನಡದ ನಾಮಫಲಕ ಕಣ್ಣಿ ಮಾರುಕಟ್ಟೆ ಪ್ರದೇಶದಲ್ಲಿ ಕಟ್ಟಡಗಳ ಮೇಲಿದ್ದ ಕನ್ನಡ ನಾಮಫಲಕವನ್ನು ಶೇ. 60% ನಾಮಫಲಕ ಅಳವಡಿಸಬೇಕು. ಇಲ್ಲವಾದರೆ ತಮ್ಮ ಕಚೇರಿಗೆ ಮುತ್ತಿಗೆ ಹಾಕುವುದು ಅನಿವಾರ್ಯವಾಗುತ್ತದೆ ಮುಂದಿನ ಆಗುಹೋಗುಗಳಿಗೆ ತಾವುಗಳು ನೇರ ಹಾಗೂ ಸಂಪೂರ್ಣ ಜವಾಬ್ದಾರರಾಗುತ್ತಿರಿ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕರುನಾಡ ವಿಜಯಸೇನೆಯ ಜಿಲ್ಲಾ ಅಧ್ಯಕ್ಷ ಪೃಥ್ವಿರಾಜ ಎಸ್ ರಾಂಪುರ, ಗಣಪತಿ ಪುಲಾರಿ, ಯುವ ಘಟಕದ ಅಧ್ಯಕ್ಷ ನಾಗರಾಜ ಮ್ಯಾತ್ರಿ , ಉಪಾಧ್ಯಕ್ಷ ಬಸವರಾಜ್ ಜಿ, ರಾಜೇಂದ್ರ ಟೈಗರ್, ವಿಶ್ವನಾಥ, ಶಿವಶಂಕರ್ ದೊಡ್ಡಮನಿ, ಸತೀಶ್ ಪುಲೆ, ಪಾವನ ದೊಡ್ಡಮನಿ, ಶಿವಪ್ಪ ಹುಡುಗಿ, ಸಚಿನ ತಳವಾರ್ ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...