ಕಲಬುರಗಿ: ಆಯುರ್ವೇದ ವಿಜ್ಞಾನವು ಜೀವನಕ್ಕೆ ಅತೀ ಅಮೂಲ್ಯವಾದುದ್ದು, ಆಯುರ್ವೇದ ಪದ್ದತಿಯನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.
ಮಂಗಳವಾರ ಕಲಬುರಗಿ ಜಿಲ್ಲಾ ವಿಜ್ಞಾನ ಕೇಂದ್ರ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ಧನ್ವಂತರಿ ಜಯಂತಿ ನಿಮಿತ್ಯ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ, ಕಲಬುರಗಿ ಜಿಲ್ಲೆಯ ಆಯುμï ಇಲಾಖೆಯು ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಕರ್ನಾಟಕದ ಇತರೆ ಜಿಲ್ಲೆಗಳಿಗೆ ಮಾದರಿಯಾಗಬೇಕು ಎಂದರು.
ಪ್ರಸ್ತಾವಿಕವಾಗಿ ಮಾತನಾಡಿದ ವೈದ್ಯಾಧಿಕಾರಿಗಳು ಡಾ|| ಶ್ರೀಶೈಲ್ ಪಾಟೀಲ್, “ಜನರಿಗಾಗಿ ಮತು ಜಗತ್ತಿಗಾಗಿ ಆಯುರ್ವೇದ” ಎನ್ನುವುದು ಈ ವರ್ಷದ ಘೋಷವಾಕ್ಯದೊಂದಿಗೆ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.
ಹಿರಿಯ ವೈದ್ಯರಾದ ಡಾ|| ಮಲ್ಲಾರಾವ್ ಮಲ್ಲೆ ಅವರು, ಆಯುರ್ವೇದ ವೈದ್ಯ ಪದ್ದತಿಯು ಪುರಾತನವಾದುದ್ದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಲಬುರಗಿ ಶ್ರೀಹಿಂಗುಲಾಂಬಿಕಾ ಆಯುರ್ವೇದಿಕ್ ಮೇಡಿಕಲ್ ಕಾಲೇಜಿನ ಪ್ರಾಧ್ಯಾಪಕರಾದ ಡಾ|| ನಿರ್ಮಲಾ ಕೆಳಮನಿ, ಜಿಲ್ಲಾ ಸರ್ಕಾರಿ ಹೋಮಿಯೋಪತಿ ಮತ್ತು ಆಯುರ್ವೇದ ಸಂಯುಕ್ತ ಆಸ್ಪತ್ರೆ ಆಯುμï ತಜ್ಞವೈದ್ಯ ಡಾ|| ಶಿಲ್ಪಾ ಬಿರಾದಾರ ಮಾತನಾಡಿದರು.
ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳಿಂದ ಶಾಲಾ, ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕರಿಗೆ ಆಯುರ್ವೇದದ ಪ್ರತಿಜ್ಞೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಆಯುಷ್ಮಾನ್ಆ ರೋಗ್ಯ ಮಂದಿರಗಳಲ್ಲಿ ಯೋಗ ಕಾರ್ಯಕ್ರಮಗಳನ್ನುಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಪಾರಂಪರಿಕ ವೈದ್ಯರು, ಆರ್.ಬಿ.ಎಸ್.ಕೆ ವೈದ್ಯರು, ಎನ್.ಎಚ್.ಎಂ ವೈದ್ಯರು ಮತ್ತು ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಜಿಲ್ಲಾ ಆಯುಷ್ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿ ಆಯುರ್ವೇದ ಆರೋಗ್ಯ ಶಿಬಿರವನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ ವಿಭಾಗ-1ಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳಿಗೆ, ಕಾರ್ಮಿಕರಿಗೆ ಹಾಗೂ ಸಾರ್ವಜನಿಕರಿಗೆ ಆಯುರ್ವೇದ ಪದ್ದತಿಯಲ್ಲಿ ಉಚಿತ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಈ ಶಿಬಿರದಲ್ಲಿ 176 ಜನ ಚಿಕಿತ್ಸೆ ಪಡೆದರು.
ಕಲಬುರಗಿ ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ|| ಗಿರಿಜಾ ಎಸ್.ಯು ಅವರು ಔಷಧಿ ಸಸ್ಯಗಳು ನೀಡುವ ಮೂಲಕ ಸ್ವಾಗತಿಸಿದರು. ಡಾ|| ಸುಧೀರ್ ಕುಳಗೇರಿ ಕಾರ್ಯಕ್ರಮ ನಿರೂಪಿಸಿದರು. ಅರುಂಧತಿ ಕುಲಕರ್ಣಿ ಪ್ರಾರ್ಥನಾ ಗೀತೆ ಹಾಡಿದರು. ಡಾ|| ಚಿದಾನಂದಮೂರ್ತಿ ವಂದಿಸಿದರು.


