ಕಲಬುರಗಿ| ಶೇ. 52ರಷ್ಟು ಹೆಚ್ಚು ಮಳೆ; ತುರ್ತು ಪರಿಹಾರ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

Date:

Share post:

ಕಲಬುರಗಿ: ಅತಿವೃಷ್ಠಿ ಹಾಗೂ ಪ್ರವಾಹದಂತಹ ಆಕಸ್ಮಿಕಗಳು ಸಂಭವಿಸಿದ ಸಂದರ್ಭಗಳಲ್ಲಿ ಅಧಿಕಾರಿಗಳು ವಿವೇಚನೆಯಿಂದ ವರ್ತಿಸಿ, ಲಭ್ಯವಿರುವ ಅನುದಾನವನ್ನು ಬಳಸಿಕೊಂಡು ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಹಾಗೂ ತಾತ್ಕಾಲಿಕ ವಸತಿ, ಆಹಾರ ಸರಬರಾಜು ಸೌಲಭ್ಯಗಳನ್ನು ಕೂಡಲೇ ಒದಗಿಸಲು ನಿರ್ಧರಿಸಬೇಕು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಕಲಬುರಗಿ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ 2025ರ ಆಗಸ್ಟ್‌ ತಿಂಗಳಲ್ಲಿ ಶೇ.69ರಷ್ಟು ಹಾಗೂ ಸೆಪ್ಟೆಂಬರ್‌ ತಿಂಗಳ ಮೊದಲ 22 ದಿನಗಳಲ್ಲಿ ಶೇ.52ರಷ್ಟು ವಾಡಿಕೆಗಿಂತಲೂ ಹೆಚ್ಚಿನ ಮಳೆಯಾಗಿದ್ದು, ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಸುರಿದ ಅಧಿಕ ಮಳೆಯಿಂದ ಆಗಿರುವ ಪರಿಣಾಮಗಳು ಹಾಗೂ ಅವುಗಳನ್ನು ಸಮರ್ಪಕವಾಗಿ ಎದುರಿಸುವ ಸಂಬಂಧ ಕಲುಬುರಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಸಭೆ ನಡೆಸಿದ ಸಚಿವರು, ಕೂಲಂಕುಷ ಚರ್ಚೆ ನಡೆಸಿ ಅಧಿಕಾರಿಗಳಿಗೆ ಹಲವು ಸೂಚನೆಗಳು ನೀಡಿದರು.

ಪ್ರವಾಹದಿಂದ ಉಂಟಾಗುವ ನೆರೆ ಪರಿಸ್ಥಿಯನ್ನು ನಿಭಾಯಿಸಲು ನಗರ ಮತ್ತು ಗ್ರಾಮೀಣ ಪ್ರದೇಶದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರನ್ನು ಗುರುತಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವದು, ಹಾಗೂ ಗುರುತಿಸಲಾದ ಕಾಳಜಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ಕುರಿತು ಸ್ಥಳ ಪರಿಶೀಲನೆ ಮಾಡುವುದು.

ನದಿ,ಹಳ್ಳ,ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ, ಕರುಗಳನ್ನು ಮೆಹಿಸುವುದು ಹಾಗೂ ಅಪಾಯವಿರುವ ಸೇತುವೆಗಳಲ್ಲಿ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು.

ನದಿ,ಹಳ್ಳ,ಕೆರೆ ದಡದಲ್ಲಿರುವ ಗುಡಿ,ಮಸಿದಿ,ಚರ್ಚ್‌ ಮುಂತಾದ ಧಾರ್ಮಿ ಕೇಂದ್ರಗಳಲ್ಲಿ ಪೊಜೆ, ಪ್ರಾರ್ಥನೆ ಹಾಗೂ ಭಾಗಿನ ಸಲ್ಲಿಸುವವರನ್ನು ಮನವೊಲಿಸಿ ನದಿ, ಹಳ್ಳ, ಕೆರೆ ದಡದಲ್ಲಿ ತೆರಳದಂತೆ ಮುನ್ನಚ್ಚರಿಕೆ ತೆಗೆದುಕೊಳ್ಳುವುದು.

ನಿರಂತರ ಮಳೆಯಿಂದ ಅಪಾಯವಿರುವ ಮನೆ, ಶಾಲೆಗಳು ಹಾಗೂ ಇತರೆ ಕಟ್ಟಡಗಳ ಗೋಡೆಗಳು ಕುಸಿಯುವ ಸಾಧ್ಯತೆ ಇರುವದರಿಂದ ಸಾವು ನೋವುಗಳು ಸಂಭವಿಸುವ ಸಂದರ್ಭವಿರುತ್ತದೆ. ಆದ್ದರಿಂದ ಸಾರ್ವಜನಿಕರಿಗೆ ಸುರಕ್ಷತೆಯ ಮುನ್ನೆಚ್ಚರಿಕೆಯ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಕ್ರಮವಹಿಸುವುದು.

ನದಿ ತೀರದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಅಪಾಯವಿರುವ ನದಿ,ಹಳ್ಳಗಳಲ್ಲಿ ಈಜಾಡುವುದು ಮತ್ತು ಪೋಟೊ,ಸೆಲ್ಪಿಗಳನ್ನು ತೆಗೆಯದಂತೆ ಸೂಚಿಸುವುದು.

ಮೀನುಗಾರರಿಗೆ ಮೀನು ಹಿಡಿಯಲು ನದಿಯಲ್ಲಿ ಹೋಗದಂತೆ ಮುನ್ನಚರಿಕೆ ಕ್ರಮಗೊಳ್ಳುವುದು.

ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲಿದ್ದು ಪ್ರವಾಹ, ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನಚ್ಚರಿಕೆ ವಹಿಸುವುದು.

ಜಲಾಶಯದಿಂದ ನೀರು ಬಿಡುವ ಬಗ್ಗೆ ಮಾಹಿತಿ ಬಂದ ಕೂಡಲೇ ನದಿ ಪಾತ್ರದಲ್ಲಿರುವ ಗ್ರಾಮಗಳ ಸಾರ್ವಜನಿಕರಿಗೆ ಮುಂಚಿತವಾಗಿ ತಿಳುವಳಿಕೆ ನೀಡಲು ಡಂಗುರದ ಮೂಲಕ ಪ್ರಚಾರ ಮಾಡಲು ಮತ್ತು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳುವುದು.

ಅತಿವೃಷ್ಠಿಯಿಂದ ನೀರು ತುಂಬಿ ಸಂಚಾರಕ್ಕೆ ಅಡ್ಡಿಯಾಗಿರುವ ಸೇತುವೆಗಳಿಗೆ ಬ್ಯಾರಿಕೇಡ್ ಗಳನ್ನು ಅಳವಡಿಸುವುದು ಮತ್ತು ಜನರು ಅಂತಹ ಸೇತುವೆಗಳ ಮೇಲೆ ಸಂಚರಿಸದಂತೆ ನಿಗಾ ವಹಿಸುವುದು.

ಪ್ರವಾಹಕ್ಕೆ ಸಿಲುಕಿ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಮುಂಜಾಗರೂಕತೆಯಾಗಿ ಡಂಗೂರ ಸಾರುವುದು, ಮೈಕ್ ಮೂಲಕ ಜಾಗೃತಿ ಮೂಡಿಸಲು ಅಧಿಕಾರಿಗಳು ಕ್ರಮವಹಿಸುವುದು.

ಪ್ರವಾಹದಿಂದ ಹಾನಿಯಾದ ಬಗ್ಗೆ ಪ್ರಾಥಮಿಕ ವರದಿಯನ್ನು ಅಧಿಕಾರಿಗಳು ಪ್ರತಿ ದಿನ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಹಾಗೂ ತುರ್ತು ಪರಿಹಾರ ನೀಡಲು ನಿಯಮಾನುಸಾರ ಕ್ರಮ ವಹಿಸಬೇಕು.

ಬೆಳೆವಿಮೆ:

2025ರ ಮುಂಗಾರು ಹಂಗಾಮಿನಲ್ಲಿ 3.01 ಲಕ್ಷ ರೈತ ಬಾಂಧವರು ನೊಂದಣಿ ಮಾಡಿಸಿದ್ದುಅತಿವೃಷ್ಟಿಯಿಂದ ಬೆಳೆ ಹಾನಿಯಾಗಿರುವ ಕಾರಣಕ್ಕೆ ಇಲ್ಲಿಯವರೆಗೆ 1.78 ಲಕ್ಷ ರೈತ ಬಾಂದವರು ಸ್ಥಳೀಯ ವಿಪತ್ತು ಅಡಿಯಲ್ಲಿ ಶೇ.59ರಷ್ಟು ರೈತ ಬಾಂಧವರು ದೂರು ಸಲ್ಲಿಸಿರುವ ಪ್ರಯುಕ್ತ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ಹಾನಿ ಸಮಿಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಕೆಲವೆ ದಿವಸಗಳಲ್ಲಿ ಬೆಳೆ ಹಾನಿಯಾದ ರೈತ ಬಾಂಧವರಿಗೆ ಪರಿಹಾರ ವಿತರಿಸಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಮಹಾರಾಷ್ಟ ರಾಜ್ಯದ ಉಜ್ಜನಿ ಮತ್ತು ಸಿನಾ ಜಲಾಶಯದಿಂದ ಭೀಮಾ ನದಿಗೆ 2.54 ಲಕ್ಷ ಕ್ಯುಸೆಕ್ ನೀರು ಬಿಡಲಾಗುತ್ತಿದೆ. ಈ ನೀರು ಅಫಜಲಪೂರ ತಾಲ್ಲೂಕಿನ ಭೀಮಾ ಸೊನ್ನ ಬ್ಯಾರೇಜಿಗೆ ಇಂದು ಬಂದು ತಲುಪುತ್ತದೆ. ಈಗಾಗಲೇ ಸೊನ್ನ ಬ್ಯಾರೇಜ್‌ನಿಂದ 2.20 ಲಕ್ಷ ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ, ಉಜ್ಜನಿ ಮತ್ತು ಸಿನಾ ಜಲಾಶಯದ ನೀರು ಬಂದ ನಂತರ ಸೊನ್ನ ಬ್ಯಾರೇಜಿನಿಂದ ಇನ್ನೂ ಹೆಚ್ಚಿನ ಗೇಟ್‌ಗಳ ಮೂಲಕ ಭೀಮಾ ನದಿಗೆ ನೀರು ಹರಿಬಿಡಲಾಗುವುದು. ಬೆಣ್ಣತ್ತೋರ ಜಲಾಶಯದಿಂದ 16500 ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ. ಮಳೆಯ ಮುನ್ನೂಚನೆ ಇರುವ ಕಾರಣ ಜಲಾಶಯದ ಒಳಹರಿವು ಹೆಚ್ಚಾಗುವ ಸಾಧ್ಯತೆ ಯಾವುದೇ ಸಮಯದಲ್ಲಿ ಜಲಾಶಯದಿಂದ ಇನ್ನು ಹೆಚ್ಚಿನ ನೀರು ನದಿಗೆ ಹರಿಸಲಾಗುವುದು. ಆದ್ದರಿಂದ ಮುಂದಿನ ದಿನಗಳಲ್ಲಿ ಸೊನ್ನ ಮತ್ತು ಬೆಣ್ಣತ್ತೋರ ಬ್ಯಾರೇಜ್ ಕೆಳಗಡೆ ಇರುವ ನದಿ ಪಾತ್ರದ ಜನರು ಮುಂಜಾಗರೂಕತೆ ವಹಸಿಲು ಸೂಚಿಸುವಂತೆ ಜಿಲ್ಲೆ, ತಾಲೂಕು, ಹೋಬಳಿ, ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿಗಳು ಕಾರ್ಯೋನ್ಮುಖರಾಗುವಂತೆ ಸಚಿವರು ನಿರ್ದೇಶನ ನೀಡಿದರು.

ಮಳೆಯಿಂದ ಮೃತರಾದವರ ಕುಟುಂಬಗಳ ಅವಲಂಬಿತರಿಗೆ ತಕ್ಷಣ ಪರಿಹಾರ ಒದಗಿಸಲು ಕ್ರಮ ಆಗಬೇಕು, ಆಸ್ಪತ್ರೆಗಳಲ್ಲಿ ಅವಶ್ಯ ಔಷಧಿಗಳು, ಒ.ಆರ್.ಎಸ್‌, ಫಸ್ಟ್‌ಎಯ್ಡ್‌ ಸಾಮಗ್ರಿಗಳನ್ನು ದಾಸ್ತಾನು ಇರಿಸಿಕೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಮನೆ ಕಳೆದುಕೊಂಡಿರುವ ನಿರಾಶ್ರಿತರನ್ನು ಆಯಾ ಗ್ರಾಮಗಳ ಪರಿಮಿತಿಯೊಳಗಿನ ಸರ್ಕಾರಿ ಕಟ್ಟಡಗಳಿಗೆ ಸ್ಥಳಾಂತರಿಸಬೇಕು, ಅಪಾಯದ ಸ್ಥಿತಿಯಲ್ಲಿರುವ ಕಟ್ಟಡಗಳಲ್ಲಿ ವಾಸ ಮಾಡುವವರನ್ನು ಸಹ ಕಾಳಜಿ ಕೇಂದ್ರಗಳಲ್ಲಿರಿಸಬೇಕು, ಬಿ.ಇ.ಒಗಳು ತೊಂದರೆಗೀಡಾದ ಗ್ರಾಮಗಳಿಗೆ ಭೇಟಿ ನೀಡಿ ಶಾಲಾ ಕಟ್ಟಡಗಳು ಶಿಥಿಲವಾಗಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು, ಹೊಳೆ ಹರಿಯುವ ಹಾಗೂ ನೀರು ನಿಂತ ಸ್ಥಳಗಳತ್ತ ಮಕ್ಕಳನ್ನು ಕಳುಹಿಸದಂತೆ ಪೋಷಕರಲ್ಲಿ ಜಾಗೃತಿ ಮೂಡಿಸಬೇಕು, ಪ್ರವಾಹಕ್ಕೆ ತುತ್ತಾಗಿರುವ ನದಿ ಹಾಗೂ ಹೊಳೆಗಳತ್ತ ಹೋಗದಂತೆ ಗ್ರಾಮಸ್ಥರು ಜಾಗ್ರತೆವಹಿಸಬೇಕು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ಬಿತ್ತನೆ ಬೀಜ ಹಾಗೂ ರಸಗೊಬ್ಬರದ ವಿವರ:

ಜಿಲ್ಲೆಯಲ್ಲಿ ಒಟ್ಟಾರೆಯಾಗಿ 21682 ಮೆಟ್ರಿಕ್‌ ಟನ್‌ ರಸಗೊಬ್ಬರ ದಾಸ್ತಾನು ಲಭ್ಯವಿದ್ದು ಅದರಲ್ಲಿ ಯುರಿಯಾ 5117 ಮೆ.ಟ ಮತ್ತು ಡಿ.ಎ.ಪಿ 5803 ಮೆ.ಟ ರಸಗೊಬ್ಬರ ಲಭ್ಯವಿದ್ದು ರಸಗೊಬ್ಬರಕ್ಕೆ ಯಾವುದೇ ಕೊರತೆಇರುವುದಿಲ್ಲ, ಹಿಂಗಾರು ಹಂಗಾಮಿಗೆ ಜಿಲ್ಲೆಗೆ 21375 ಕ್ವಿಂಟಲ್‌ ಬೀಜ ಸರಕಾರದ ಸಹಾಯಧನದಲ್ಲಿ ವಿತರಿಸಲು ಯೋಜನೆ ರೂಪಿಸಿದ್ದು ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ ದಾಸ್ತಾನು ಮಾಡಲಾಗುತ್ತಿದೆ. ಮುಂದಿನ 2-3 ದಿವಸಗಳಲ್ಲಿ ಹಿಂಗಾರು ಹಂಗಾಮಿನ ಬೀಜ ವಿತರಣೆ ಪ್ರಾರಂಭಿಸಲಾಗುವುದು. ಜಿಲ್ಲೆಯಲ್ಲಿ ಸಾಕಷ್ಟು ಬೀಜದಾಸ್ತಾನು ಲಭ್ಯವಿದ್ದು ಯಾವುದೇ ಬೀಜದ ಕೊರತೆ ಇರುವುದಿಲ್ಲ ಎಂದು ಸಚಿವರು ಹೇಳಿದರು.

ಕುಡಿಯುವ ನೀರು ಕಲುಷಿತಗೊಳ್ಳುವ ಸಾಧ್ಯತೆಗಳಿದ್ದು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಜಾಗ್ರತೆ ವಹಿಸುವಂತೆ ಸೂಚಿಸಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಪ್ರವಾಹದಿಂದ ತೊಂದರೆಗೊಳಗಾಗಿರುವ ಗ್ರಾಮಗಳಲ್ಲಿನ ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಬೇಕು, ನೀರು ಕಲುಷಿತಗೊಂಡಿದ್ದಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಬೇಕೆಂದು ಹೇಳಿದರು. ಕಲಬುರಗಿ ನಗರ ಹಾಗೂ ಇನ್ನಿತರ ಪಟ್ಟಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕುಡಿಯುವ ನೀರಿನ ಬಗ್ಗೆ ಜಾಗ್ರತೆವಹಿಸಬೇಕೆಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್‌, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್‌ ಸಿಂಗ್‌ ಮೀನ, ಜಿಲ್ಲಾ ರಕ್ಷಣಾಧಿಕಾರಿ ಅಡ್ಡೂರು ಶ್ರೀನಿವಾಸುಲು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕುಗಳ ತಹಸೀಲ್ದಾರರು, ತಾಲ್ಲೂಕು ಇ.ಒಗಳು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...