ಕಲಬುರಗಿ| ಸೋಲಾಪುರ ಬಳಿ ಸೇತುವೆ ಜಲಾವೃತ; 2 ರೈಲು ರದ್ದು, ಸಂಚಾರದಲ್ಲಿ ಭಾರೀ ವ್ಯತ್ಯಯ

Date:

Share post:

ಕಲಬುರಗಿ: ಧಾರಾಕಾರ ಸುರಿದ ಮಳೆಯಿಂದಾಗಿ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಪಾಕಿನಿ – ಮುಂಡೇವಾಡಿ ರೈಲು ನಿಲ್ದಾಣಗಳ ಮಧ್ಯೆ ಇರುವ ನದಿ ಸೇತುವೆ ಜಲಾವೃತಗೊಂಡಿರುವ ಹಿನ್ನೆಲೆ ಕಲಬುರಗಿಯಿಂದ ಪುಣೆ, ಮುಂಬೈಗೆ ಸಂಚರಿಸುವ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಚೆನ್ನೈನಿಂದ ಮುಂಬೈ ಕಡೆಗೆ ಹೋಗುವ ರೈಲು (12164) ಹಾಗೂ ಬೆಂಗಳೂರಿನಿಂದ ಮುಂಬೈ ಕಡೆಗೆ ಹೋಗುವ ಉದ್ಯಾನ ಎಕ್ಸ್ಪ್ರೆಸ್ ರೈಲು (11302) ಸಂಚಾರದಲ್ಲಿ ವ್ಯತ್ಯಯವಾಗಿವೆ.

ಉದ್ಯಾನ ಎಕ್ಸ್ಪ್ರೆಸ್ ರೈಲು ಕಲಬುರಗಿ ರೈಲು ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ, ಚೆನ್ನೈ ನಿಂದ ಮುಂಬೈಗೆ ಹೋಗುವ ರೈಲು ಬೆಳಗ್ಗೆ 6.15 ಗಂಟೆಗೆ ಹೊರಡಬೇಕಿತ್ತು. ಆದರೆ ಸೋಲಾಪುರ ಸಮೀಪದ ಸೇತುವೆ ಬಳಿ ನದಿ ನೀರು ಸೇತುವೆಯ ಮೇಲ್ಭಾಗದ ಸಮೀಪ ಉಕ್ಕಿ ಹರಿಯುತ್ತಿರುವ ಹಿನ್ನೆಲೆ ಈ ಎರಡು ರೈಲುಗಳನ್ನು ಮಧ್ಯಾಹ್ನ 3 ಗಂಟೆಯ ಬಳಿಕ ಬೀದರ್, ಲಾತುರ್ ಹಾಗೂ ಕುರ್ದವಾಡಿ ಮೂಲಕ ಸಂಚಾರ ನಡೆಸಲಿವೆ ಎಂದು ಕಲಬುರಗಿ ರೈಲು ನಿಲ್ದಾದ ವ್ಯವಸ್ಥಾಪಕ ಪಿ.ಜೆ. ಜಿಜಿಮೊನ್ ತಿಳಿಸಿದ್ದಾರೆ.

ಬೆಂಗಳೂರಿನಿಂದ ದೆಹಲಿಗೆ ಹೋಗುವ ಕರ್ನಾಟಕ ಎಕ್ಸ್ಪ್ರೆಸ್ ರೈಲು (1227) ಕಲಬುರಗಿ ರೈಲು ನಿಲ್ದಾಣದಿಂದ ಬೆಳಗ್ಗೆ ಹೊರಟಿದ್ದು ಇದೀಗ ಕಲಬುರಗಿ – ಸೋಲಾಪುರ ರೈಲು ನಿಲ್ದಾಣದ ಮಧ್ಯೆ ನಿಂತಿದೆ ಎಂದು ತಿಳಿದುಬಂದಿದೆ.

ಅಲ್ಲದೆ, ಕಲಬುರಗಿಯಿಂದ ಕೊಲ್ಹಾಪುರ ಕಡೆಗೆ ಹೋಗುವ ಕೊಲ್ಹಾಪುರ ಎಕ್ಸ್ಪ್ರೆಸ್ ಹಾಗೂ ಕಲಬುರಗಿ ಯಿಂದ ಬೀದರ್ ಕಡೆ ಹೋಗುವ ಡೆಮೋ ರೈಲು ರದ್ದುಪಡಿಸಲಾಗಿದೆ ಎಂದು ಸ್ಟೇಷನ್ ಮಾಸ್ಟರ್ ಮಾಹಿತಿ ನೀಡಿದ್ದಾರೆ.

ಪ್ರಯಾಣಿಕರ ಪರದಾಟ:

ಚೆನ್ನೈ ಹಾಗೂ ಬೆಂಗಳೂರಿನಿಂದ ಮುಂಬೈ, ದೆಹಲಿ ಕಡೆಗೆ ಹೋಗುವ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಗಿರುವ ಕಾರಣದಿಂದ ಅಂತರ ರಾಜ್ಯ ಪ್ರಯಾಣಿಕರು ಪರದಾಡಿರುವ ಘಟನೆ ಕಲಬುರಗಿ ರೈಲು ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆಯಿಂದ ನಡೆದಿದೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...