ಕಲಬುರಗಿ| ಗುಲಬರ್ಗಾ ವಿವಿಯ ಸಮಗ್ರ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಆಗ್ರಹ

Date:

Share post:

ಕಲಬುರಗಿ: ಶೈಕ್ಷಣಿಕವಾಗಿ ಮತ್ತು ಆಡಳಿತಾತ್ಮಕವಾಗಿ ಶ್ರೀಮಂತ ಇತಿಹಾಸ ಹೊಂದಿರುವ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಹಿಂದಿನಂತೆ ಘನತೆ ಹೆಚ್ಚಿಸಿ ಸರ್ವಾಂಗೀಣ ಅಭಿವೃದ್ಧಿಗೆ ಬದ್ದತೆ ಪ್ರದರ್ಶಿಸುವಂತೆ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಆಗ್ರಹಿಸಿದೆ.

ವಿವಿಯ ನೂತನ ಕುಲಪತಿಗಳಾಗಿ ನೇಮಕವಾದ ಪ್ರೊ. ಶಶಿಕಾಂತ ಎಸ್. ಉಡಿಕೇರಿ ಅವರಿಗೆ ಹೋರಾಟ ಸಮಿತಿಯ ನಿಯೋಗ ಭೇಟಿ ಮಾಡಿ, ವಿವಿಯಲ್ಲಿ ಖಾಲಿ ಇರುವ ಶಿಕ್ಷಕರ ಮತ್ತು ಶಿಕ್ಷಕೇತರ ಹುದ್ದೆಗಳ ಭರ್ತಿ ಮಾಡುವುದು, ಮತ್ತಿತ್ತರ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ದಿಟ್ಟತನದ ಧೋರಣೆ ನುಸರಿಸಬೇಕೆಂದು ಕುಲಪತಿಗಳಿಗೆ ನಿಯೋಗ ಒತ್ತಾಯಿಸಿದೆ.

ಕಲ್ಯಾಣ ಕರ್ನಾಟಕದ ವಿಭಾಗೀಯ ಕೇಂದ್ರ ಕಲಬುರಗಿಯಲ್ಲಿರುವ ಗುಲಬರ್ಗಾ ವಿವಿಯ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತೀರಿ ಎಂದು ಭರವಸೆ ಇಟ್ಟಿರುವುದಾಗಿ ಸಮಿತಿಯ ಮುಖಂಡರು ಹೇಳಿದ್ದಾರೆ.

ಈ ಸಂದರ್ಭದಲ್ಲಿ ವಿವಿಯ ಕುಲಸಚಿವರಾದ ಪ್ರೊ.ರಮೇಶ ಲಂಡನಕರ್, ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಡಾ.ಲಕ್ಮಣ ದಸ್ತಿ , ಸಮಿತಿಯ ಪ್ರಮುಖರಾದ ಪ್ರೊ.ಆರ್.ಕೆ.ಹುಡಗಿ, ಪ್ರೊ.ಬಸವರಾಜ ಕುಮ್ನುರ್, ಡಾ.ಮಾಜಿದ ದಾಗಿ, ಮನೀಷ್ ಜಾಜು.ರೌಫ ಖಾದ್ರಿ, ರಾಜು ಜೈನ ಸೇರಿದಂತೆ ಅನೇಕರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...