ಕಲಬುರಗಿ| ಬಿಜೆಪಿಯ ಆತ್ಮವಂಚನೆಯ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Date:

Share post:

ಕಲಬುರಗಿ: ಅಧಿಕಾರದಲ್ಲಿದ್ದಾಗ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ ನಡೆಸುವುದು ಹಾಸ್ಯಸ್ಪದವಾಗಿದೆ. ಬಿಜೆಪಿಯ ಈ ಆತ್ಮವಂಚನೆಯ ಪ್ರತಿಭಟನೆಗಳು ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ.

ತಮ್ಮ ” ಎಕ್ಸ್ ” ಖಾತೆಯಲ್ಲಿ ಈ ಬಗ್ಗೆ ಅಂಕಿ ಅಂಶಗಳ ಸಮೇತ ಸುದೀರ್ಘವಾಗಿ ಬರೆದುಕೊಂಡಿರುವ ಅವರು ಬಿಜೆಪಿ ಆಡಳಿತವಧಿಯಲ್ಲಿ ಕಲಬುರಗಿ ಜಿಲ್ಲೆಗೆ ಒಂದು ಮಂತ್ರಿ ಸ್ಥಾನವನ್ನು ಕೊಟ್ಟಿರಲಿಲ್ಲ, ಆಗ ಇದ್ದಂತಹ ಉಸ್ತುವಾರಿ ಮಂತ್ರಿಗಳು ಜಿಲ್ಲೆಯ ಕಡೆ ತಲೆ ಹಾಕುತ್ತಿರಲಿಲ್ಲ, ಇಂತಹ ಬಿಜೆಪಿಗೆ ಇಂದು ನಮ್ಮ ಕಡೆ ಬೆರಳು ತೋರಿಸುವುದಕ್ಕೆ ಕನಿಷ್ಠ ಮಟ್ಟದ ನೈತಿಕತೆ ಇಲ್ಲ ಎಂದು ಟೀಕಿಸಿದ್ದಾರೆ.

ಕಲಬುರಗಿಯ ಜನರ ಸಂಕಷ್ಟಕ್ಕೆ ಬಿಜೆಪಿ ಸರ್ಕಾರ ಹೇಗೆ ನಡೆದುಕೊಂಡಿತ್ತು ಎಂಬುದರ ಬಗ್ಗೆ ಅಂಕಿ ಅಂಶಗಳೇ ಮಾತನಾಡುತ್ತವೆ. ಜಿಲ್ಲೆಯ ರೈತರಿಗೆ ಯಾವ ಸರ್ಕಾರ ಎಷ್ಟು ಅನುಕೂಲ ಮಾಡಿಕೊಟ್ಟಿದೆ ಎನ್ನುವುದನ್ನು ನಾವು ಹೇಳುವುದು ಬೇಕಿಲ್ಲ, ಅಂಕಿ ಅಂಶಗಳೇ ಹೇಳುತ್ತವೆ. ಬಿಜೆಪಿ ಸರ್ಕಾರದ ಅವಧಿಯ ನಾಲ್ಕು ವರ್ಷಗಳಲ್ಲಿ ನೆರೆ, ಬರದ ವಿಷಯದಲ್ಲಿ ಬಿಜೆಪಿ ಪರಿಹಾರ ಒದಗಿಸಿಕೊಟ್ಟಿದ್ದು ನಗಣ್ಯ.

ಬಿಜೆಪಿ ಅವಧಿಯಲ್ಲಿ ರೈತರಿಗೆ ದೊರಕಿದ ಬೆಳೆ ವಿಮೆ ಪರಿಹಾರ:

– 2019 –20ನೇ ಸಾಲಿನಲ್ಲಿ 38,248 ರೈತರಿಗೆ ₹16.65 ಕೋಟಿ ಪರಿಹಾರ ಮಾತ್ರ.

– 2020 – 21ನೇ ಸಾಲಿನಲ್ಲಿ 37,145 ರೈತರಿಗೆ ಕೇವಲ ₹22.97 ಕೋಟಿ ಪರಿಹಾರ ಮಾತ್ರ.

– 2021 – 22ನೇ ಸಾಲಿನಲ್ಲಿ 66,234 ರೈತರಿಗೆ ₹57.95 ಕೋಟಿ ಪರಿಹಾರ ಮಾತ್ರ.

– 2022 – 23ನೇ ಸಾಲಿನಲ್ಲಿ 1,88,600 ರೈತರಿಗೆ ಒದಗಿಸಿದ್ದು ₹108.6 ಕೋಟಿ ಪರಿಹಾರ ಮಾತ್ರ.

– ನಾಲ್ಕು ವರ್ಷದಲ್ಲಿ ಒಟ್ಟು ₹206.17 ಕೋಟಿ ಪರಿಹಾರ ಮಾತ್ರ ನೀಡಲಾಗಿದೆ.

 

ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡೇ ವರ್ಷದಲ್ಲಿ ಅತಿ ಹೆಚ್ಚು ಬೆಳೆ ವಿಮೆ ಪರಿಹಾರ ಒದಗಿಸುವಲ್ಲಿ ಯಶಸ್ವಿಯಾಗಿದೆ.

 

– 2023 – 24ನೇ ಸಾಲಿನಲ್ಲಿ 1,59,622 ರೈತರಿಗೆ ₹189.40 ಕೋಟಿ ಪರಿಹಾರ ನೀಡಿದ್ದೇವೆ.

– 2024-25 ನೇ ಸಾಲಿನಲ್ಲಿ 2,03,746 ರೈತರಿಗೆ ₹656.63 ಕೋಟಿ ಪರಿಹಾರ ಒದಗಿಸಿದ್ದೇವೆ.

– ಒಟ್ಟು 3,63,368 ರೈತರಿಗೆ ₹846.03 ಕೋಟಿ ಪರಿಹಾರವನ್ನು ಎರಡೇ ವರ್ಷದಲ್ಲಿ ಒದಗಿಸಿದ್ದೇವೆ.

– ತೊಗರಿಯ ನೆಟೆ ರೋಗದ ಬಗ್ಗೆ ಬಿಜೆಪಿ ತಲೆ ಕೆಡಿಸಿಕೊಂಡಿರಲೇ ಇಲ್ಲ, ನಮ್ಮ ಸರ್ಕಾರವು 2023-24ನೇ ಸಾಲಿನಲ್ಲಿ 1,78,354 ರೈತರಿಗೆ ₹181.86 ಕೋಟಿ ನೆಟೆ ರೋಗದ ಪರಿಹಾರ ಒದಗಿಸಿದೆ.

 

ಹಾಗೆಯೇ, ಹೆಚ್ಚು ಇನ್ ಪುಟ್ ಸಬ್ಸಿಡಿಯನ್ನು ಒದಗಿಸಿಕೊಡುವ ಮೂಲಕ ರೈತರ ನೆರವಿಗೆ ನಿಂತಿದೆ ನಮ್ಮ ಸರ್ಕಾರ, ಎರಡು ವರ್ಷಗಳಲ್ಲಿ 3,49,555 ರೈತರಿಗೆ ₹389.14 ಕೋಟಿ ಸಬ್ಸಿಡಿ ಒದಗಿಸಲಾಗಿದೆ.

ಎರಡೇ ವರ್ಷದ ಅವಧಿಯಲ್ಲಿ ಒಟ್ಟು 8,91,277 ರೈತರು ಫಲಾನುಭವಿಗಳಾಗಿದ್ದಾರೆ, ₹1,417.02 ಕೋಟಿ ಹಣ ರೈತರ ಕೈ ಸೇರಿದೆ.

 

ಬಿಜೆಪಿ ಸರ್ಕಾರ ಕಲಬುರಗಿ ರೈತರಿಗೆ ನಾಲ್ಕು ವರ್ಷಗಳಲ್ಲಿ ಕೊಟ್ಟಿರುವ ಮೊತ್ತದ ಏಳು ಪಟ್ಟು ಹೆಚ್ಚು ಹಣವನ್ನು ನಮ್ಮ ಸರ್ಕಾರ ಎರಡೇ ವರ್ಷದಲ್ಲಿ ಒದಗಿಸಿದೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಕಲಬುರಗಿಯಲ್ಲಿ ಈಗಾಗಲೇ ನೆರೆ ಪರಿಸ್ಥಿತಿ ಇದೆ, ಬಿಜೆಪಿಯವರ ನಕಲಿ ಮೊಸಳೆ ಕಣ್ಣೀರಿನಿಂದ ಪ್ರವಾಹ ಹೆಚ್ಚಾಗಬಹುದು, ಹಾಗಾಗಿ ಅವರ ನಕಲಿ ಕಣ್ಣೀರು, ಆತ್ಮವಂಚಕತನದ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...