ಕಲಬುರಗಿ: ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಅಕ್ಟೋಬರ್ 15ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಫ್ಲೈಟ್‍ಕ್ರಿವ್ ಏವಿಯೇಶನ್ ಅಕಾಡೆಮಿಯಲ್ಲಿ ಸಮಾಲೋಚನಾಕಾರರು, ಇಂಗ್ಲೀಷ್ ಟ್ರೇನಿ, ಟೇಲಿಕಾಲರ್, ಫ್ರಂಟ್ ಆಫೀಸ್ ಎಕ್ಸಿಕ್ಯೂಟೀವ್ ಹುದ್ದೆಗಳಿಗೆ ಯಾವುದೇ ಪದವಿ ಹಾಗೂ ಸ್ನಾತ್ತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.
ಕಲಬುರಗಿ ಡಾನ್‍ಬಾಸ್ಕೋ ಟೇಕ್‍ದಲ್ಲಿ ಟ್ರೇನರ್ (ಕಸ್ಟ್‍ಮರ್ ಕೆರ್ ಎಕ್ಸಿಕ್ಯೂಟೀವ್) ಹುದ್ದೆಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 23 ರಿಂದ 40 ವರ್ಷದೊಳಗಿರಬೇಕು. ಫೀಲ್ಡ್ ಆಫೀಸರ್ ಹುದ್ದೆಗೆ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 21 ರಿಂದ 35 ವರ್ಷದೊಳಗಿರಬೇಕು.
ಲಾಹೋಟಿ ಮೋಟಾರ್ಸ್‍ದಲ್ಲಿ ರಿಲೇಷನ್‍ಶೀಫ್ ಮ್ಯಾನೇಜರ್, ಕರ್ಮಶಿಯಲ್ ಎಕ್ಸಿಕ್ಯೂಟೀವ್, ರಿಸೇಪ್‍ನಿಸ್ಟ್/ ಶೋರೂಮ್ ಹೊಸ್ಟೆಸ್ಟ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು.
ಅನ್ನಪೂರ್ಣ ಫೈನಾನ್ಸ್‍ದಲ್ಲಿ ಫಿಲ್ಡ್ ಕ್ರೆಡಿಟ್ ಆಫೀಸರ್ ಮತ್ತು ಅಸಿಸ್ಟಂಟ್ ಬ್ರ್ಯಾಂಚ್ ಮ್ಯಾನೇಜರ್ ಹುದ್ದೆಗಳಿಗೆ ಪಿಯುಸಿ/ಐಟಿಐ/ ಡಿಪ್ಲೋಮಾ/ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು. ಯುನಿಟ್ ಮ್ಯಾನೇಜರ್ ಹುದ್ದೆಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 21 ರಿಂದ 32 ವರ್ಷದೊಳಗಿರಬೇಕು. ಜೋಯಾಲುಕ್ಕಾಸ್‍ದಲ್ಲಿ ಸೆಲ್ಸ್ ಎಕ್ಸಿಕ್ಯೊಟಿವ್ ಮತ್ತು ಸೆಲ್ಸ್‍ಟ್ರೇನಿ ಹುದ್ದೆಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 32 ವರ್ಷದೊಳಗಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್‍ಕಾರ್ಡ್ ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಉದ್ಯೋಗಮೇಳದಲ್ಲ್ಲಿ ಭಾಗವಹಿಸಬೇಕು. ಉದ್ಯೋಗಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846ಗೆ ಸಂಪರ್ಕಿಸಲು ಕೋರಲಾಗಿದೆ.


