ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

Date:

Share post:

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ ಅಗತ್ಯ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಚಿಂಚೋಳಿ ತಾಲೂಕಿನ ಮೋತಕಪಲ್ಲಿ ಗ್ರಾಮದಲ್ಲಿ ನಡೆದಿದೆ.

ಕುಟುಂಬಸ್ಥರು ಮನೆಯಲ್ಲಿದ್ದಾಗಲೇ ಸಿಲಿಂಡರ್ ಸೋರಿಕೆ ವಾಸನೆಯಿಂದ ಬಂದಿದೆ, ತೀವ್ರ ವಾಸನೆ ಬರುತ್ತಲೇ ಕುಟುಂಬದ ನಾಲ್ವರು ಸದಸ್ಯರು ಮನೆಯಿಂದ ಹೊರಬಂದ ತಕ್ಷಣವೇ ಸಿಲಿಂಡರ್ ಸ್ಫೋಟವಾಗಿದೆ. ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಮನೆಯಲ್ಲಿನ ಚಿನ್ನಾಭರಣ, ನಗದು, ಮನೆಗೆ ಬೇಕಾಗುವತಹ ಅಗತ್ಯ ವಸ್ತುಗಳು ಸುಟ್ಟು ಭಸ್ಮವಾಗಿವೆ. ಕೂಡಲೇ ಸರ್ಕಾರದಿಂದ ಪರಿಹಾರ ನೀಡಬೇಕೆಂದು ಕುಟುಂಬಸ್ಥರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ತಗುಲಿದ ಮನೆಗೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಸುಲೇಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...