ಕಲಬುರಗಿ- ಬೆಂಗಳೂರು ವಿಮಾನ ಸಂಚಾರಕ್ಕೆ ಸಂಸದ ರಾಧಾಕೃಷ್ಣ ದೊಡ್ಡಮನಿ ಒತ್ತಾಯ

Date:

Share post:

ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣ ಮೂಲಕ ಬೆಂಗಳೂರಿಗೆ ತಕ್ಷಣ ವಿಮಾನ ಸಂಚಾರ ಪುನಃ ಆರಂಭಿಸುವಂತೆ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜಾರಪು ಅವರನ್ನು ಸಂಸದರಾದ ರಾಧಾಕೃಷ್ಣ ದೊಡ್ಡಮನಿ ಖುದ್ದಾಗಿ ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದರು ಕಲಬುರಗಿಯಿಂದ ಬೆಂಗಳೂರಿಗೆ ವಿಮಾನ ಸಂಚಾರ ಪುನಃ ಆರಂಭಿಸುವುದು ಅವಶ್ಯಕವಾಗಿರುವ ಬಗ್ಗೆ ಮನವರಿಕೆ ಮಾಡಿದರು.

ಸ್ಟಾರ್ ಏರ್ ಲೈನ್ಸ್ ಸಂಸ್ಥೆ ಕಲಬುರಗಿ ಯಿಂದ ತನ್ನ ವಿಮಾನಯಾನ ಕಾರ್ಯಚರಣೆಯನ್ನು ಸ್ಥಗಿತಗೊಳಿಸಿದೆ. ಇದರಿಂದ‌ ಕಲಬುರಗಿ ಅಷ್ಟೇ ಅಲ್ಲದೇ ಸುತ್ತಮುತ್ತಲಿನ ಭಾಗಗಳ ವ್ಯಾಪಾರಸ್ಥರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಪ್ರವಾಸಿಗರಿಗೆ ತೊಂದರೆಯಾಗಿದೆ ಎಂದು ರಾಧಾಕೃಷ್ಣ ದೊಡ್ಡಮನಿ ಅವರು ಒತ್ತಿ ಹೇಳಿದರು.

ಕಲಬುರಗಿಯು ಕಲ್ಯಾಣ ಕರ್ನಾಟಕದ ಪ್ರಮುಖ ವ್ಯಾಣಿಜ್ಯ ಕೇಂದ್ರವಾಗಿದ್ದು, ಅದರ ಜೊತೆಗೆ ವಿಭಾಗೀಯ ಕೇಂದ್ರವಾಗಿದೆ. ಜಿಲ್ಲೆಯಲ್ಲಿ ಕೇಂದ್ರೀಯ ವಿವಿ ಸೇರಿದಂತೆ ನಾಲ್ಕು ವಿವಿಗಳಿದ್ದು, ಪ್ರಮುಖ ಶಿಕ್ಷಣ ಸಂಸ್ಥೆಗಳಿವೆ. ಸಾರ್ವಜನಿಕರು ಬೆಂಗಳೂರಿನೊಂದಿಗೆ ವ್ಯಾಪಾರ ಉದ್ಯೋಗ ಸೇರಿದಂತೆ ಶೈಕ್ಷಣಿಕ ಅವಶ್ಯಕತೆಗಳಿಗೆ ನಿರಂತರವಾಗಿ ಪ್ರಯಾಣ ಮಾಡುತ್ತಿದ್ದು, ಇದೀಗ ವಿಮಾನ ಸಂಚಾರ ಸ್ಥಗಿತಗೊಂಡಿದ್ದರಿಂದ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಕೂಡಲೇ ಕಲಬುರಗಿ ಯಿಂದ ಬೆಂಗಳೂರಿಗೆ ವಿಮಾನ ಸಂಚಾರ ಪುನಃ ಆರಂಭಿಸುವಂತೆ ಸಚಿವರಿಗೆ ಒತ್ತಾಯಿಸಿದರು.

ಕಲಬುರಗಿಯಿಂದ ಮುಂಬೈ ಹಾಗೂ ನವದೆಹಲಿ ವಿಮಾನ ಸಂಚಾರ ಪ್ರಾರಂಭಿಸುವಂತೆ ಇದೇ ಸಂದರ್ಭದಲ್ಲಿ ಸಂಸದರು ವಿಮಾನಯಾನ ಸಚಿವರನ್ನು ಕೋರಿದರು.

ಸಂಸದರ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮೊಬೈಲ್ ಮೂಲಕ ಮಾತನಾಡಿ ವಿಮಾನಯಾನ ಪುನಃ ಆರಂಭಿಸುವ ಕುರಿತು ಕೂಡಲೇ ಕ್ರಮವಹಿಸುವಂತೆ ಸೂಚಿಸಿದರು. ನಂತರ, ಸಂಸದರೊಂದಿಗೆ ಮಾತನಾಡಿದ ಸಚಿವರು, ದೆಹಲಿಗೆ ವಾಪಸ್ ತೆರಳಿದ ನಂತರ ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರಾಯಚೂರು ಸಂಸದರಾದ ಜಿ. ಕುಮಾರ ನಾಯಕ ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...

ಕಲಬುರಗಿ: ಗುಂಡಿನ ದಾಳಿ; ವ್ಯಕ್ತಿಯ ಭೀಕರ ಕೊಲೆ

ಕಲಬುರಗಿ: ಬಲರಾಮ ಚೌಕ್ ನಿಂದ ವಾಡಿ ಪಟ್ಟಣಕ್ಕೆ ಸ್ಕೂಟಿ ಮೇಲೆ ಹೋಗುತ್ತಿದ್ದ...

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...