ಕಲಬುರಗಿ| ಭೀಕರ ರಸ್ತೆ ಅಪಘಾತ; ಸ್ಥಳದಲ್ಲೆ ನಾಲ್ವರು ಸಾವು!

Date:

Share post:

ಕಲಬುರಗಿ: ಬೈಕ್ ಮತ್ತು ಕಾರಿಗೆ ಟ್ಯಾಂಕರ್ ವೊಂದು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೆ ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲೂಕಿನ ಅವರಾದ್(ಬಿ) ಗ್ರಾಮದ ಸಮೀಪ ಶುಕ್ರವಾರ ರಾತ್ರಿ ನಡೆದಿದೆ.

ಕಮಲಾಪುರ ತಾಲ್ಲೂಕಿನ ಶಿರಡೋಣ ಗ್ರಾಮದ ನಾಗೇಂದ್ರಪ್ಪ (33), ಶಿವರಾಜ್(32), ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಂದ್ರಕಲಾ(70) ಹಾಗೂ ದತ್ತಾತ್ರೇಯ(48) ಮೃತ ದುರ್ದೈವಿಗಳೆಂದು ತಿಳಿದುಬಂದಿದ್ದು, ಅದರಲ್ಲಿ ಉತ್ತಮ(36) ಹಾಗೂ ಮಹಿಳೆ ಸುದೇಶ್ನಾ ಎಂಬುವವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುಮನಾಬಾದ್ ಕಡೆಗೆ ಹೋಗುತ್ತಿದ್ದ ಬೈಕ್ ಹಾಗೂ ಕಾರಿಗೆ ಹುಮನಾಬಾದ್ ಕಡೆಯಿಂದ ಕಲಬುರಗಿಯತ್ತ ಹೋಗುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಮೃತಪಟ್ಟರೆ, ಕಾರಿನಲ್ಲಿದ್ದ ಮತ್ತಿಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಭೀಕರ ರಸ್ತೆ ಅಪಘಾತದಿಂದ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿದೆ.

ಈ ಕುರಿತು ಕಲಬುರಗಿ ಸಂಚಾರಿ ಠಾಣೆ-2 ರಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...