ಕಲಬುರಗಿ| ಐತಿಹಾಸಿಕ ಸನ್ನತಿ- ಕನಗನಹಳ್ಳಿ ಅಭಿವೃದ್ದಿಗಾಗಿ ಅಧಿಕಾರಿಗಳೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಭೆ

Date:

Share post:

ಕಲಬುರಗಿ: ಐತಿಹಾಸಿಕ ಸನ್ನತಿ- ಕನಗನಹಳ್ಳಿ ಅಭಿವೃದ್ದಿಗಾಗಿ ಜಿಲ್ಲಾಡಳಿತ ಮತ್ತು ನಿರ್ಮಾಣ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅತಿ ಶೀಘ್ರದಲ್ಲಿ ಡಿಪಿಆರ್ ತಯಾರಿಸಿ, ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲು ಬೇಕಿರುವ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಬೆಂಗಳೂರಿನಲ್ಲಿ ಶುಕ್ರವಾರ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಸಚಿವರು‌ ಜಗತ್ತಿಗೆ ಅಹಿಂಸೆ, ಶಾಂತಿ ಮತ್ತು ಮಾನವೀಯತೆಯ ಬೆಳಕು ತೋರಿದ ಬೌದ್ಧ ಧರ್ಮದ ದಾರ್ಶನಿಕತೆಯು ಕರ್ನಾಟಕದಲ್ಲಿಯೂ ಅತ್ಯಂತ ಪ್ರಭಾವಿಯಾಗಿತ್ತು.

ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರವು ಬೌದ್ಧ ಚಿಂತನೆಗಳ ಶ್ರೀಮಂತ ಪರಂಪರೆಯ ಪ್ರಮುಖ ಸಾಂಸ್ಕೃತಿಕ ಕೇಂದ್ರವಾಗಿತ್ತು ಎನ್ನುವುದು ನಮ್ಮೆಲ್ಲರನ್ನು ರೋಮಾಂಚನಗೊಳಿಸುವ ಸಂಗತಿ.

ಸಾಮ್ರಾಟ್ ಅಶೋಕನ ಕಾಲಮಾನದಲ್ಲಿ ನಿರ್ಮಾಣವಾಗಿರುವ ಮಹಾಚೈತ್ಯ ಎಂದು ಕರೆಸಿಕೊಳ್ಳುವ ಸನ್ನತಿ-ಕನಗನಹಳ್ಳಿ ಸ್ತೂಪ ನಮ್ಮ ಹೆಮ್ಮೆಯ ಚರಿತ್ರೆಯ ಹೆಗ್ಗುರುತುಗಳಲ್ಲಿ ಒಂದು. ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿರುವ ಕನಗನಹಳ್ಳಿಯ ಬೌದ್ಧ ತಾಣದ ಹಿಂದಿನ ವೈಭವವನ್ನು ಮರುಸ್ಥಾಪಿಸುವ ಪ್ರಯತ್ನ ನಮ್ಮದು ಎಂದು ಹೇಳಿ ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...