ಕಲಬುರಗಿ| ಜಿಲ್ಲೆಗೆ 250.97 ಕೋಟಿ ರೂ. ಅತಿವೃಷ್ಠಿ ಹಾನಿಯ ಪರಿಹಾರ ಮಂಜೂರು: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ 

Date:

Share post:

ಕಲಬುರಗಿ: ಪ್ರಸಕ್ತ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರೀ ಮಳೆ ಹಾಗೂ ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ರಾಜ್ಯ ಸರ್ಕಾರ ಎಸ್.ಡಿ.ಆರ್.ಎಫ್/ ಎನ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಜಿಲ್ಲೆಯ 3.26 ಲಕ್ಷ‌ ರೈತರಿಗೆ 250.97 ಕೋಟಿ ರೂ. ಪರಿಹಾರ ಮಂಜೂರಾತಿ ನೀಡಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಕಳೆದ ಆಗಸ್ಟ್ ಮತ್ತು ಸೆಪ್ಟೆಂಬರ್ ಮಾಹೆಯಲ್ಲಿ ಅಪಾರ‌ ಪ್ರಮಾಣದ‌ಲ್ಲಿ ಬಿದ್ದ ಮಳೆಯಿಂದ 3.24 ಲಕ್ಷ ಹೆಕ್ಟೇರ್ ಪ್ರದೇಶ ಕೃಷಿ,‌ ತೋಟಗಾರಿಕೆ ಪ್ರದೇಶ ಹಾನಿಯಾಗಿದ್ದಕ್ಕೆ ಪರಿಹಾರ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಇದೀಗ ಸರ್ಕಾರ ಪರಿಹಾರ ತಂತ್ರಂಶದಲ್ಲಿ ಅರ್ಹ ರೈತರ ಹಾಗೂ ಹಾನಿ ಪ್ರದೇಶದ ದತ್ತಾಂಶದನ್ವಯ ಮೊದಲನೆ ಹಂತದಲ್ಲಿ SDRF/NDRF ಮಾರ್ಗಸೂಚಿಯನ್ವಯ ಜಿಲ್ಲೆಯ 3,26,183 ಫಲಾನುಭವಿ ರೈತರಿಗೆ ಒಟ್ಟು 250.97 ಕೋಟಿ ರೂ. ಹಣ ಮಂಜೂರಾತಿ ನೀಡಲಾಗಿದ್ದು, ಇನ್ ಪುಟ್ ಸಬ್ಸಿಡಿ ನೇರವಾಗಿ ಆಧಾರ ಸಂಖ್ಯೆಗೆ ಜೋಡಣೆ ಹೊಂದಿರುವ ಸಂಬಂದಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ಮುಂದಿನ 3-4 ದಿನಗಳಲ್ಲಿ ಪರಿಹಾರ ಹಣ ಜಮೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...