ಕಲಬುರಗಿ| ಕೊಲೆಗೆ ಯತ್ನ ಆರೋಪ; ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ ಬಂಧನ

Date:

Share post:

ಕಲಬುರಗಿ: ಕೊಲೆಗೆ ಯತ್ನದ ಆರೋಪದ ಮೇರೆಗೆ ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ ಅವರನ್ನು ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ.

ಜೇವರ್ಗಿಯ ನಾರಾಯಣಪುರ ಗ್ರಾಮದ ನಾಟಿ ಔಷಧಿ ಕೊಡುವ ರಶೀದ್ ಮುತ್ಯಾ ಎಂಬಾತರನ್ನು ಬಂಧಿಸಿ, ಅವರನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಮಣಿಕಂಠ ರಾಠೋಡ್ ಅದೇ ಗ್ರಾಮದಲ್ಲಿ ಹಲವು ಜನರೊಂದಿಗೆ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆಯ ಬಳಿಕ ಗ್ರಾಮದಲ್ಲಿ ದೊಡ್ಡ ಹೈಡ್ರಾಮಾ ಸೃಷ್ಟಿಸಲಾಗಿದೆ. ಬಳಿಕ ರಶೀದ್ ಮುತ್ಯಾ ಅಲ್ಲಿಂದ ಕಾರಿನ ಮೂಲಕ ಬೇರೆ ಕಡೆಗೆ ಹೋಗುತ್ತಿದ್ದ ವೇಳೆ ಕಾರಿಗೆ ಕಲ್ಲು ಹೊಡೆದಿದ್ದು, ಕಾರು ಚಾಲಕನಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಇದೇ ಕಾರಣಕ್ಕಾಗಿ ಕೊಲೆಗೆ ಯತ್ನಿಸಿರುವ ಆರೋಪದ ಮೇರೆಗೆ ಮಣಿಕಂಠ ರಾಠೋಡ್ ರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...