ಕಲಬುರಗಿ| ಮಾನವ ಹಕ್ಕುಗಳ ಸಂರಕ್ಷಣೆ ಅಗತ್ಯ: ಕರುಣಾ ಪಾಟೀಲ

Date:

Share post:

ಕಲಬುರಗಿ: ಇಂದಿನ ಆಧುನಿಕ ಯುಗದಲ್ಲಿ ಜನರು ಯಂತ್ರಗಳಿಗೆ ತಮ್ಮ ಸಮಯ ಮೀಸಲಿಟ್ಟಿದ್ದಾರೆ, ಇಂತಹ ಸಂದರ್ಭದಲ್ಲಿ ಮನುಷ್ಯ ತನ್ನ ಹಕ್ಕುಗಳನ್ನು ಮರೆತಿರುವನು ಎಂದು ಸೇಠ್ ಶಂಕರಲಾಲ್ ಲಾಹೋಟಿ ಕಾನೂನು ಮಹಾವಿದ್ಯಾಲಯದ ಉಪನ್ಯಾಸಕಿಯರಾದ ಕರುಣಾ ಅವರು ಹೇಳಿದರು.

ಮುಂದುವರೆದು ಹೆಚ್ಚುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದರು ಮತ್ತು ಸಾಂವಿಧಾನಿಕ ನಿಬಂಧನೆಗಳ ಬೆಳಕಿನಲ್ಲಿ ಪ್ರತಿಯೊಬ್ಬ ವ್ಯಕ್ತಿಯ ಮೂಲಭೂತ ಹಕ್ಕುಗಳನ್ನು ರಕ್ಷಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಉಪ ಪ್ರಾಚಾರ್ಯರಾದ ಪ್ರೊ ವೀಣಾ ಎಚ್ ಅವರು ಮಾನವ ಹಕ್ಕುಗಳ ಸಂರಕ್ಷಣೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಗೀತಾ ಪಾಟೀಲ್ ಅವರು ಸ್ವಾಗತ ಮತ್ತು ಪ್ರಸ್ತಾವಿಕವಾಗಿ ಮಾತನಾಡಿದರು. ಕವಿತಾ ಅಶೋಕ್ ಅವರು ಕಾರ್ಯಕ್ರಮ ನಿರೂಪಿಸಿದರು, ಕುಮಾರಿ ದಿವ್ಯಾ ವಂದಿಸಿದರು.

ಕಾರ್ಯಕ್ರಮದಲ್ಲಿ ಡಾ ನಾಗರತ್ನ, ಶಿವಲೀಲಾ ಧೋತ್ರೆ, ದಾನಮ್ಮ ಬಿರಾದಾರ್, ಬಸಮ್ಮ ಗೊಬ್ಬುರ, ಅಶ್ವಿನಿ ಮಠ, ಮೋಹ್ಸಿನ ಫಾತಿಮಾ ಇನ್ನಿತರರು ಮತ್ತು ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದರು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...