ಕಲಬುರಗಿ| ಮದ್ಯದಂಗಡಿಗಳಲ್ಲಿ ಕಳ್ಳತನ; 2.11 ಲಕ್ಷ ದೋಚಿದ ಖದೀಮರು

Date:

Share post:

ಕಲಬುರಗಿ: ಚಿಂಚೋಳಿ ಪಟ್ಟಣದ ಬಸ್ ನಿಲ್ದಾಣದ ಸಮೀಪದಲ್ಲಿರುವ ಎರಡು ಮದ್ಯದಂಗಡಿಗಳ ಕೀಲಿ ಮುರಿದ ಕಳ್ಳರು 2.11 ಲಕ್ಷದಷ್ಟು ನಗದು ಕದ್ದು ಪರಾರಿಯಾಗಿರುವ ಘಟನೆ ಮಂಗಳವಾದ ನಸುಕಿನ ಜಾವದಲ್ಲಿ ನಡೆದಿದೆ.

ಬಸ್ ನಿಲ್ದಾಣದ ಪಕ್ಕದಲ್ಲಿರುವ ಎಸ್.ಆರ್. ಪಾಟೀಲ ಅವರಿಗೆ ಸೇರಿದ ಅಂಗಡಿಯಿಂದ ₹1.30 ಲಕ್ಷ, ಎಸ್ಬಿಐ ಬ್ಯಾಂಕ್ ಸಮೀಪದಲ್ಲಿರುವ ನಾಗಯ್ಯ ಕೋಟಕಿ ಅವರಿಗೆ ಸೇರಿದ ಮದ್ಯದ ಅಂಗಡಿಯಿಂದ 81 ಸಾವಿರ ನಗದು ಹಣ ಸೇರಿದಂತೆ ಒಟ್ಟಾರೆ 2.11 ಲಕ್ಷ ಕಳವು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಅಂಗಡಿಯ ಶಟರ್ ಎತ್ತುವ ನಾಲ್ವರು ಕಳ್ಳರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...