ಕಲಬುರಗಿ| ರಸ್ತೆ ಸುರಕ್ಷತಾ ಜಾಗೃತಿ ಬೈಕ್ ರ್ಯಾಲಿಗೆ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ ಚಾಲನೆ

Date:

Share post:

ಕಲಬುರಗಿ: ಪೊಲೀಸರು ಕೇವಲ ಕಾನೂನು ಜಾಗೃತಿ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಕಟ್ಟುನಿಟ್ಟಿನ ಅನುಷ್ಠಾನ ಮತ್ತು ವೈಯಕ್ತಿಕ ಜವಾಬ್ದಾರಿಯತ್ತ ದಿಟ್ಟ ಹೆಜ್ಜೆ ಇಡುವ ಅಗತ್ಯವಿದೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಎಸ್.ಡಿ. ಶರಣಪ್ಪ ಅವರು ಹೇಳಿದರು.

ಜಿಲ್ಲಾ ಪೊಲೀಸ್ ಮೈದಾನದಲ್ಲಿ ಮಂಗಳವಾರ ಕಲಬುರಗಿ ನಗರ ಪೊಲೀಸ್ ಹಾಗೂ ಯುನೈಟೆಡ್ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ “ರಸ್ತೆ ಸುರಕ್ಷತಾ ಜಾಗೃತಿ ಬೈಕ್ ರ್ಯಾಲಿ”ಗೆ ಚಾಲನೆ ನೀಡಿ ಮಾತನಾಡಿದ ಅವರು, ಪೊಲೀಸ್ ಸಿಬ್ಬಂದಿಯೇ ಮೊದಲು ನಿಯಮ ಪಾಲನೆ ಮಾಡಿ ಸಮಾಜಕ್ಕೆ ಮಾದರಿಯಾಗಬೇಕು, 2026ನೇ ವರ್ಷ ರಸ್ತೆ ಸುರಕ್ಷತೆಯ ಚಳವಳಿ ಮತ್ತು ಕ್ರಿಯೆಯ ವರ್ಷವಾಗಬೇಕು ಎಂದು ಘೋಷಿಸಿದರು.

ಕಾನೂನು ಜಾರಿಗೆ ತರುವ ಜವಾಬ್ದಾರಿ ಮಾತ್ರವಲ್ಲ, ಕಾನೂನನ್ನು ಗೌರವಿಸಿ ಪರಿಪಾಲಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ. ಪ್ರತಿದಿನ ಅಪಘಾತಗಳಲ್ಲಿ ಅಮೂಲ್ಯ ಜೀವಗಳು ಕಳೆದುಹೋಗುತ್ತಿರುವುದನ್ನು ನೋಡುತ್ತಿದ್ದೇವೆ. ಅವರ ಮೇಲೆ ಅವಲಂಬಿತರಾದ ಕುಟುಂಬಗಳು ಅನುಭವಿಸುವ ದುಃಖವೂ ನಮ್ಮ ಮುಂದೆ ಇದೆ. ಟ್ರಾಫಿಕ್ ನಿಯಮಗಳನ್ನು ಪಾಲಿಸದಿದ್ದರೆ ನಮಗೂ ಅದೇ ಗತಿ ಬರುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

“ಹೆಲ್ಮೆಟ್ ಧರಿಸಿದರೆ ಸಾವಿನ ಸಾಧ್ಯತೆ ಶೇ.70ರಿಂದ 80ರಷ್ಟು ಕಡಿಮೆಯಾಗುತ್ತದೆ. ನೀವು ಹೆಲ್ಮೆಟ್ ಧರಿಸಿದರೆ, ಇತರರು ಅನುಸರಿಸುತ್ತಾರೆ. ಅವರನ್ನು ನೋಡಿ ಮತ್ತಷ್ಟು ಜನರಿಗೆ ಪ್ರೇರಣೆಯಾಗುತ್ತದೆ. ಇದು 2026ರಲ್ಲಿ ಒಂದು ಚಳವಳಿಯಾಗಬೇಕು. ರಸ್ತೆ ಸುರಕ್ಷತೆ ಒಂದು ವಾರದ ಕಾರ್ಯಕ್ರಮವಾಗದೆ, ಪ್ರತಿದಿನದ ಬದ್ಧತೆಯಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪ ಪೊಲೀಸ್ ಆಯುಕ್ತ ಪ್ರವೀಣ ಎಚ್. ನಾಯಕ್, ಸಹಾಯಕ ಪೊಲೀಸ್ ಆಯುಕ್ತ ಶರಣಬಸಪ್ಪ ಸುಬೇದಾರ್, ಹಾಗೂ ಟ್ರಾಫಿಕ್ ವಿಭಾಗ-1 ಮತ್ತು 2ರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಯುನೈಟೆಡ್ ಆಸ್ಪತ್ರೆಯ ವೈದ್ಯರೂ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು. ನರವೈದ್ಯ ಹಾಗೂ ಮೆದುಳು-ಮೂಳೆ ತಜ್ಞ ಡಾ. ವಿನಯಸಾಗರ್ ಶರ್ಮಾ ಅವರು ಹೆಲ್ಮೆಟ್ ಮತ್ತು ಸೀಟ್ಬೆಲ್ಟ್ಗಳಿಂದ ತಲೆ ಹಾಗೂ ಮೆದುಳು ಗಾಯಗಳನ್ನು ಹೇಗೆ ತಪ್ಪಿಸಬಹುದು ಎಂಬುದನ್ನು ವಿವರಿಸಿದರು. ಟ್ರಾಮಾ ಮತ್ತು ಲ್ಯಾಪ್ರೋಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ಮೊಹಮ್ಮದ್ ಅಬ್ದುಲ್ ಬಸೀರ್ ಅವರು ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಮೊದಲು ತೆಗೆದುಕೊಳ್ಳಬೇಕಾದ ಪ್ರಾಥಮಿಕ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಬೈಕ್ ರ್ಯಾಲಿ ಜಗತ್ ವೃತ್ತ, ತಿಮ್ಮಾಪುರ ವೃತ್ತ ಮಾರ್ಗವಾಗಿ ಸಂಚರಿಸಿ ಮತ್ತೆ ಪೊಲೀಸ್ ಮೈದಾನಕ್ಕೆ ತಲುಪಿತು. ರಸ್ತೆ ಸುರಕ್ಷತೆ ಬಗ್ಗೆ ಕಠಿಣ ಶಿಸ್ತು ಪಾಲನೆಗೆ ಈ ರ್ಯಾಲಿ ಸಾರ್ವಜನಿಕರ ಗಮನ ಸೆಳೆಯಿತು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...