ಕಲಬುರಗಿ: ಮಿಣಜಗಿಯಲ್ಲಿ ಹೊಸ ಕಟ್ಟಡಗಳ ಲೋಕಾರ್ಪಣೆ

Date:

Share post:

ಕಲಬುರಗಿ ತಾಲೂಕಿನ ಮಿಣಜಗಿ ಗ್ರಾಮದಲ್ಲಿ 2023–24ನೇ ಸಾಲಿನ ವಿವಿಧ ಅಭಿವೃದ್ಧಿ ಯೋಜನೆಗಳ ಅಡಿಯಲ್ಲಿ ನಿರ್ಮಿಸಲಾದ ಅಂಗನವಾಡಿ ಕಟ್ಟಡ ಹಾಗೂ ಗ್ರಾಮ ಪಂಚಾಯತ್ ಕಟ್ಟಡಗಳನ್ನು ಇಂದು  ಲೋಕಾರ್ಪಣೆ ಮಾಡಲಾಯಿತು.

 ಕೆ.ಕೆ.ಆರ್.ಡಿ.ಬಿ. ಮೈಕ್ರೋ ಯೋಜನೆಯಡಿ 25.27 ಲಕ್ಷ ರೂ. ವೆಚ್ಚದಲ್ಲಿ ಮಕ್ಕಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ನೂತನ ಅಂಗನವಾಡಿ ಕಟ್ಟಡ ನಿರ್ಮಿಸಲಾಗಿದೆ.  ಅದೇ ರೀತಿ 2023–24ನೇ ಸಾಲಿನ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆ ಹಾಗೂ ಮಹಾತ್ಮ ಗಾಂಧಿ ನರೇಗಾ ಯೋಜನೆಗಳ ಒಗ್ಗೂಡಿಸುವಿಕೆಯಲ್ಲಿ 35.50 ಲಕ್ಷ ರೂ. ವೆಚ್ಚದಲ್ಲಿ ಗ್ರಾಮ ಪಂಚಾಯತ್ ಕಟ್ಟಡ ನಿರ್ಮಾಣಗೊಂಡಿದೆ ಎಂದರು.

 ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಅಧ್ಯಕ್ಷರಾದ ಅರುಣಕುಮಾರ ಪಾಟೀಲ ಮಾತನಾಡಿ, ಗ್ರಾಮೀಣ ಭಾರತ ಬಲಿಷ್ಠವಾಗದೇ ರಾಜ್ಯ ಹಾಗೂ ರಾಷ್ಟ್ರದ ಪ್ರಗತಿ ಸಾಧ್ಯವಿಲ್ಲ. ಮಕ್ಕಳ ಪೌಷ್ಟಿಕತೆ, ಮಹಿಳೆಯರ ಸಬಲೀಕರಣ ಮತ್ತು ಗ್ರಾಮೀಣ ಆಡಳಿತ ವ್ಯವಸ್ಥೆಯನ್ನು ಸದೃಢಗೊಳಿಸುವುದು ನಮ್ಮ ಜನಸೇವೆಯ ಪ್ರಮುಖ ಭಾಗವಾಗಿದೆ ಎಂದು ಹೇಳಿದರು.

ಮಿಣಜಗಿ ಗ್ರಾಮದಂತಹ ಹಳ್ಳಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಯ ಮೂಲಕ ಜನರಿಗೆ ಗೌರವಯುತ ಜೀವನ ಸೌಲಭ್ಯ ಒದಗಿಸುವುದೇ ನಮ್ಮ ರಾಜಕೀಯ ಬದ್ಧತೆ ಎಂದು  ತಿಳಿಸಿದ ಅವರು, ಅಫಜಲಪುರ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಮ್ಮ ಸಂಕಲ್ಪ ನಿರಂತರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಸೈಯದ್ ಪಟೇಲ್, ಜಿ.ಪಂ. ಎಇಇ ಶರಣಯ್ಯ ಸ್ವಾಮಿ, ಪಿಡಿಒ ಸಿದ್ಧರಾಮ ಚಿಂಚೋಳಿ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಈಶಾನ್ಯ ಶಿಕ್ಷಕರ ಮತಕ್ಷೇತ್ರ ಚುನಾವಣೆ: ಶಿಕ್ಷಕರಿಂದ ಭರ್ಜರಿ ಮತದಾನ

ಕಲಬುರಗಿ: ವಿಧಾನ ಪರಿಷತ್ ಪ್ರವೇಶಕ್ಕಾಗಿ ನಡೆಯುತ್ತಿರುವ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ...

ಕಲಬುರಗಿ| ಜಿಲ್ಲೆಯಾದ್ಯಂತ ಸಂಭ್ರಮದ ರಾಜ್ಯೋತ್ಸವ ಆಚರಣೆಗೆ ನಿರ್ಧಾರ: ಜಿಲ್ಲಾಧಿಕಾರಿ ಇಕ್ರಮ್ ಶರೀಫ್

ಕಲಬುರಗಿ: ಮುಂಬರುವ ನವೆಂಬರ್ 1 ರಂದು ಜಿಲ್ಲೆಯಾದ್ಯಂತ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ...

ಕಲಬುರಗಿ| ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಮೂವರು ಆರೋಪಿಗಳ ಬಂಧನ

5.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಬೈಕ್...

ಕಲಬುರಗಿ| ನಾಲವಾರದ ಪೂಜ್ಯರ ಜನ್ಮದಿನದ ಅಂಗವಾಗಿ 155ಕ್ಕೂ ಹೆಚ್ಚು ಮಂದಿಗೆ ಉಚಿತ ಕ್ಷೌರ ಸೇವೆ

ಕಲಬುರಗಿ: ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಸದ್ಗುರು ಶ್ರೀ ಕೋರಿಸಿದ್ದೇಶ್ವರ ಮಠದ...