ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

Date:

Share post:

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರು ಶುಕ್ರವಾರ ಕಲಬುರಗಿ‌ ನಗರ ಸುತ್ತಾಡಿ ಮಹಾನಗರ ಪಾಲಿಕೆಯಿಂದ ನಗರದಾದ್ಯಂತ‌ ನಡೆಯುತ್ತಿರುವ ರಸ್ತೆ ಸುಧಾರಣೆ,‌ ದುರಸ್ತಿ, ಒಳಚರಂಡಿ ನಿರ್ಮಾಣ, ರಸ್ತೆ ಗುಂಡಿ ಮುಚ್ಚುವ ಕಾರ್ಯ ಪರಿಶೀಲಿಸಿದರು.

ಕಲಬುರಗಿ ಕೇoದ್ರ ಬಸ್ ನಿಲ್ದಾಣ ಮುಂಭಾಗದಲ್ಲಿ ಕೆ.ಕೆ.ಆರ್.ಡಿ.ಬಿ.ಯ 2 ಕೋಟಿ ರೂ. ಅನುದಾನದಲ್ಲಿ ನಡೆಯುತ್ತಿರುವ ಕಲ್ವರ್ಟ್ ಕಾಮಗಾರಿ ಪರಿಶೀಲಿಸಿದ ಡಿ.ಸಿ., ಇದು ಜನಸಂದಣಿ ಹೆಚ್ಚಿರುವ ಪ್ರದೇಶ ಇದಾಗಿರುವುದರಿಂದ ಕೂಡಲೇ ಕಾಮಗಾರಿ ಮುಗಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಮತ್ತು ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರನಿಗೆ ಸೂಚನೆ ನೀಡಿದರು.

ನಂತರ ಹಳೇ ಜೇವರ್ಗಿ ರಸ್ತೆಯ ಮೋಹನ ಲಾಡ್ಜ್ ನಿಂದ ರಾಮ ಮಂದಿರ ಸರ್ಕಲ್ ವರೆಗೆ ಎನ್.ಸಿ.ಎ.ಪಿ ಯೋಜನೆಯಡಿ ಸುಮಾರು 1.20 ಕೋಟಿ ರೂ. ವೆಚ್ಚದೊಂದಿಗೆ ಮೂರು ವರ್ಷಗಳ ನಿರ್ವಹಣೆ ಕಾಮಗಾರಿ ಪ್ರಗತಿಯಲ್ಲಿದ್ದು, ಸುಮಾರು‌ 87 ಲಕ್ಷ‌ ರೂ. ವೆಚ್ಚದಲ್ಲಿ ಖರೀದಿಸಿದ ಪಾಪ್ ಹೋಲ್ ಫಿಲ್ಲಿಂಗ್ ಮಶೀನ್ ಗಳಿಂದ ನಡೆಯುತ್ತಿರುವ ರಸ್ತೆ ಗುಂಡಿ ಮುಚ್ಚುವ ಕಾರ್ಯ ಸಹ ಪರಿವೀಕ್ಷಿಸಿದರು.

ಇದಲ್ಲದೆ ನ್ಯಾಷನಲ್ ಗ್ರೀನ್ ಟ್ರಿಬುನಲ್ ಯೋಜನೆಯಡಿ ಸುಮಾರು 40 ಕೋಟಿ ರೂ. ವೆಚ್ಚದಲ್ಲಿ ಖರ್ಗೆ ಪೆಟ್ರೋಲ್ ಪಂಪ್ ನಿಂದ ಅನ್ನ ಪೂರ್ಣ ಕ್ರಾಸ್ ರಸ್ತೆಯ ಸ್ವದೇಶಿ ಭವನ ವರೆಗೆ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ಸಹ ಡಿ.ಸಿ ಮತ್ತು ಪಾಲಿಕೆ ಆಯುಕ್ತರು ಜಂಟಿಯಾಗಿ ಪರಿಶೀಲಿಸಿದರು‌. ಖರ್ಗೆ ಪೆಟ್ರೋಲ್ ಪಂಪ್ ಮತ್ತು ರಾಮ ಮಂದಿರ ಸರ್ಕಲ್ ನಲ್ಲಿನ ಸಂಚಾರಿ ಸಿಗ್ನಲ್‌ಗಳನ್ನು ಒಂದು ವಾರದೊಳಗೆ ಸರಿಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರಾಧಿಕಾರದ 4 ಸರ್ಕಲ್ ಸೌಂದರ್ಯೀಕರಣ:

ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರವು ತಮ್ನ ಅನದಾನದಲ್ಲಿ ನಗರದ ರಾಮ ಮಂದಿರ ಸರ್ಕಲ್, ಅಫಜಲಪೂರ ಸರ್ಕಲ್, ಆಳಂದ ರಸ್ತೆ, ಹುಮನಾಬಾದ ರಸ್ತೆ ಸರ್ಕಲ್‌ಗಳನ್ನು ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ಸೌಂದರ್ಯೀಕರಣ ಮತ್ತು ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ರಾಮ‌ ಮಂದಿರ ಸರ್ಕಲ್ ಸ್ಥಳವನ್ನು ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ಪ್ರಾಧಿಕಾರದ ಪ್ರಭಾರಿ ಆಯುಕ್ತ ಶಿವಕುಮಾರ ಪಾಟೀಲ, ಎ.ಇ.ಇ. ಸುಭಾಷ ನಾಯಕ್ ಸ್ಥಳದಲ್ಲಿದ್ದು, ಯೋಜನೆ ಕುರಿತು ಡಿ.ಸಿ.ಗೆ ಮಾಹಿತಿ ನೀಡಿದರು. ಇದಲ್ಲದೆ ಪಾಲಿಕೆಯಿಂದ ಖರ್ಗೆ ಪೆಟ್ರೋಲ್ ಪಂಪ್ ಸರ್ಕಲ್ ಅಭಿವೃದ್ದಿಪಡಿಸುತ್ತಿರುವುದರಿಂದ ಸದರಿ ಸ್ಥಳವು ಪರಿಶೀಲಿಸಲಾಯಿತು.

ಮಹಾನಗರ ಪಾಲಿಕೆಯ ಅಧೀಕ್ಷಕ ಅಭಿಯಂತ ದತ್ತಾತ್ರೇಯ, ಕಾರ್ಯನಿರ್ವಾಹಕ ಅಭಿಯಂತ ಪುರುಷೋತ್ತಮ, ಕಲಬುರಗಿ ನಗರ ಸಂಚಾರ ವಿಭಾಗದ ಡಿ.ಎಸ್.ಪಿ ಸುಧಾ ಆದಿ,‌ ಸಿ.ಪಿ.ಐ ಶಕೀಲ‌ ಅಂಗಡಿ ಸೇರಿದಂತೆ ಪಾಲಿಕೆ ಮತ್ತು ಪ್ರಾಧಿಕಾರದ ಅಧಿಕಾರಿಗಳು ಹಾಗೂ ಡಲ್ಟ್ ಅಧಿಕಾರಿಗಳು ಜೊತೆಯಲ್ಲಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...