ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶ

Date:

Share post:

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-01 ನ್ನು ಕಲಬುರಗಿ ಜಿಲ್ಲೆಯ ಅಫಜಲಪುರ-12, ಆಳಂದ-18, ಚಿಂಚೋಳಿ-10, ಚಿತ್ತಾಪುರ-21, ಕಲಬುರಗಿ ಉತ್ತರ-30, ಕಲಬುರಗಿ ದಕ್ಷಿಣ-23, ಜೇವರ್ಗಿ-17, ಸೇಡಂ-10 ಹೀಗೆ ಜಿಲ್ಲೆಯ ಒಟ್ಟು 141 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ.

 

ಪರೀಕ್ಷೆಯನ್ನು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಸಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆಯಲ್ಲಿನ ಎಲ್ಲಾ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಬಿ.ಎನ್.ಎಸ್.ಎಸ್. ಕಲಂ 163 ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದ್ದಾರೆ.

 

ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ-35(ಸಿ)ರ ಅನ್ವಯ ಪರೀಕ್ಷಾ ಸಮಯದಲ್ಲಿ ಸಂಬಂಧಪಟ್ಟ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಸಿಬ್ಬಂದಿ ವರ್ಗದವರನ್ನು ಹೊರತುಪಡಿಸಿ, ಯಾವುದೇ ಬೇರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಮೊಬೈಲ್ ಫೋನ್, ಪೇಜರ್, ಬ್ಲ್ಯೂಟೂತ್ ಹಾಗೂ ವೈರಲೆಸ್ ಸೆಟ್‍ಗಳು ಹಾಗೂ ಮತ್ತಿತರ ಎಲೆಕ್ಟ್ರಾನಿಕ್ಸ್ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ. ಇದಲ್ಲದೇ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿನ ಎಲ್ಲಾ ಜೆರಾಕ್ಸ್ ಮತ್ತು ಪುಸ್ತಕ ಅಂಗಡಿ, ಸೈಬರ್ ಹಾಗೂ ಕಂಪ್ಯೂಟರ್ ಸೆಂಟರ್‍ಗಳನ್ನು ಸಹ ಮುಚ್ಚುವಂತೆಯೂ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಆದೇಶಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ...

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...

ಕಲಬುರಗಿ: ಗುಂಡಿನ ದಾಳಿ; ವ್ಯಕ್ತಿಯ ಭೀಕರ ಕೊಲೆ

ಕಲಬುರಗಿ: ಬಲರಾಮ ಚೌಕ್ ನಿಂದ ವಾಡಿ ಪಟ್ಟಣಕ್ಕೆ ಸ್ಕೂಟಿ ಮೇಲೆ ಹೋಗುತ್ತಿದ್ದ...

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...