ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

Date:

Share post:

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದ್ದು, ಕಲಬುರಗಿ ಜಿಲ್ಲೆಯ ಕಲೆ, ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸವನ್ನು ಒಳಗೊಂಡ ಆಕರ್ಷಕ ಕಾಫಿ ಟೇಬಲ್ ಪುಸ್ತಕ ಹಾಗೂ ಪ್ರವಾಸಿ ಮಾಹಿತಿ ಬ್ರೋಶರ್‌ಗಳನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ವಿಧಾನಸೌಧದಲ್ಲಿ ಬಿಡುಗಡೆ ಮಾಡಿದರು.

ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಆಶಯದಂತೆ, ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರಪ್ರಥಮ ಬಾರಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಈ ಪ್ರಕಟಣೆಗಳನ್ನು ಸಿದ್ಧಪಡಿಸಲಾಗಿದೆ. ಸುಮಾರು ರೂ. 11.05 ಲಕ್ಷ ಅನುದಾನದಲ್ಲಿ ಮುದ್ರಿಸಲಾದ ಈ ಕಾಫಿ ಟೇಬಲ್ ಪುಸ್ತಕ ಹಾಗೂ ಬ್ರೋಶರ್‌ಗಳು ಜಿಲ್ಲೆಯ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಇತರೆ ಪ್ರವಾಸಿ ತಾಣಗಳ ಸಮಗ್ರ ಮಾಹಿತಿಯನ್ನು ಒಳಗೊಂಡಿವೆ.

ಕಲಬುರಗಿ ಜಿಲ್ಲೆಗೆ ಭೇಟಿ ನೀಡುವ ದೇಶೀಯ ಹಾಗೂ ವಿದೇಶಿ ಪ್ರವಾಸಿಗರಿಗೆ ಸಂಕ್ಷಿಪ್ತ ಮತ್ತು ಸ್ಪಷ್ಟ ಮಾಹಿತಿಯನ್ನು ಒದಗಿಸಲು ಬ್ರೋಶರ್‌ಗಳು ಸಹಾಯಕವಾಗಲಿವೆ. ಇದೇ ವೇಳೆ ಪ್ರವಾಸೋದ್ಯಮ ಮೇಳಗಳು, ಟ್ರಾವೆಲ್ ಎಕ್ಸಪೋಗಳು ಸೇರಿದಂತೆ ವಿವಿಧ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಈ ಕಾಫಿ ಟೇಬಲ್ ಪುಸ್ತಕಗಳು ಜಿಲ್ಲೆಯ ಪ್ರವಾಸೋದ್ಯಮವನ್ನು ವ್ಯಾಪಕವಾಗಿ ಪರಿಚಯಿಸಲು ನೆರವಾಗಲಿವೆ.

ಬಿಡುಗಡೆ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯಸಿಂಗ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ...

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...

ಕಲಬುರಗಿ: ಗುಂಡಿನ ದಾಳಿ; ವ್ಯಕ್ತಿಯ ಭೀಕರ ಕೊಲೆ

ಕಲಬುರಗಿ: ಬಲರಾಮ ಚೌಕ್ ನಿಂದ ವಾಡಿ ಪಟ್ಟಣಕ್ಕೆ ಸ್ಕೂಟಿ ಮೇಲೆ ಹೋಗುತ್ತಿದ್ದ...

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...