ಕಲಬುರಗಿ: ಸಿಡಿಲು ಬಡಿದು ಯುವಕ ಬಲಿ

Date:

Share post:

ಕಲಬುರಗಿ: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮದ ಸಮೀಪದ ಧನಸಿಂಗ್‌ ನಾಯಕ ತಾಂಡಾದಲ್ಲಿ ಮಂಗಳವಾರ ಸಂಜೆ ನಡೆದಿದೆ.

ಮಹೇಶ ಕಿಶನ್ ಚವ್ಹಾಣ (22) ಮೃತ ಯುವಕ ಎಂದು ತಿಳಿದುಬಂದಿದೆ. ಹೊಲದಲ್ಲಿ ಕೆಲಸ ಮಾಡುವಾಗ ಬಡಿದ ಸಿಡಿಲಿಗೆ ಯುವಕ ಮೃತಪಟ್ಟಿದ್ದಾನೆ.

ಶಾಲಾಬಾಯಿ-ಕಿಶನ್ ದಂಪತಿಗೆ ನಾಲ್ವರು ಮಕ್ಕಳಿದ್ದು, ಇವರ ಪೈಕಿ ಮೂವರು ವಿದ್ಯಾಭ್ಯಾಸ ಮಾಡುತ್ತಿದ್ದರೆ, ಕುಟುಂಬಕ್ಕೆ ಆಸರೆಯಾಗಿ ಒಕ್ಕಲುತನ ಮಾಡಿಕೊಂಡಿದ್ದ ದ್ವಿತೀಯ ಪುತ್ರ ಮಹೇಶ ಸಿಡಿಲು ಬಡಿದು ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಕುಂಚಾವರಂ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...

ಕಲಬುರಗಿ: 11 ಜಿಲ್ಲೆಗಳಲ್ಲಿ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಸಚಿವ ಶಿವಾನಂದ ಪಾಟೀಲ ಆದೇಶ

ಕಲಬುರಗಿ: ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ...

ಕಲಬುರಗಿ: ಮಾಹಿತಿ ನೀಡದ ಕಲಬುರಗಿ ಜಿ.ಪಂ ಉಪ ಕಾರ್ಯದರ್ಶಿ ಸೇರಿ 18 ಅಧಿಕಾರಿಗಳಿಗೆ ₹1.50 ಲಕ್ಷ ದಂಡ: ಬಿ. ವೆಂಕಟಸಿಂಗ್

ಕಲಬುರಗಿ: ಮಾಹಿತಿ ಹಕ್ಕು ಅಧಿನಿಯಮದಡಿ ಸಕಾಲಕ್ಕೆ ಮಾಹಿತಿ ನೀಡಲು ನಿರ್ಲಕ್ಷ್ಯ ವಹಿಸಿದುದು,...