ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

Date:

Share post:

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ ಸಾವಳಗಿ(ಬಿ) ಗ್ರಾಮದ ಸಮೀಪದ ಅಜೀಮ್ ಪ್ರೇಮ್ ಜೀ ಶಾಲೆಯ ವಿದ್ಯಾರ್ಥಿ ಗಣೇಶ್ ಬೋಸ್ಲೆ ಕಲಬುರಗಿ ಜಿಲ್ಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

 

ಒಟ್ಟು 625 ಅಂಕಗಳಿಗೆ 623 ಅಂಕಗಳನ್ನು ಪಡೆದು ಕಲಬುರಗಿ ಜಿಲ್ಲೆಗೆ ಪ್ರಥಮ ರ್ಯಾಂಕ್ ಹಾಗೂ ರಾಜ್ಯಕ್ಕೆ ತೃತೀಯ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಕಲಬುರಗಿ ನಗರದ ನ್ಯೂ ರಾಘವೇಂದ್ರ ಕಾಲೋನಿಯ ನಿವಾಸಿಗಳಾದ ಸಹದೇವ ಬೋಸ್ಲೆ – ಗೀತಾ ದಂಪತಿಗಳ ಕೊನೆಯ ಸುಪುತ್ರರಾಗಿದ್ದಾರೆ.

ಇಂಗ್ಲಿಷ್ ಹಾಗೂ ವಿಜ್ಞಾನ ವಿಷಯಗಳಲ್ಲಿ ಒಂದೊಂದು ಅಂಕ ಕಡಿಮೆ ಗಳಿಸಿದ್ದು, ಅವೆರಡು ಅಂಕ ಬಂದಿದ್ರೆ ಚೆನ್ನಾಗಿರುತ್ತಿತ್ತು ಎಂದು ವಿದ್ಯಾರ್ಥಿ ಗಣೇಶ ಅಭಿಪ್ರಾಯಪಟ್ಟಿದ್ದು, ಮುಂದೆ ಎಂ.ಬಿ.ಬಿ.ಎಸ್ ಕೋರ್ಸ್ ಮುಗಿಸಿ ಮಕ್ಕಳ ಡಾಕ್ಟರ್ ಆಗುವ ಆಸೆ ಇದೆ ಎಂದು ಹೇಳಿಕೊಂಡಿದ್ದಾನೆ.

ನಗರದ ಎಸ್.ಬಿ.ಆರ್ ಶಾಲೆಯ ಮಾಧವಿ ಹಾಗೂ ಮೇಘನಾ ವಿದ್ಯಾರ್ಥಿಗಳಿಬ್ಬರೂ 622 ಅಂಕಗಳು ಪಡೆಯುವ ಮೂಲಕ ಕಲಬುರಗಿ ಜಿಲ್ಲೆಗೆ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...