ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

Date:

Share post:

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ ಅವರು ನೇಮಕಗೊಂಡಿದ್ದಾರೆ.

ನಿರ್ಗಮಿತ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತರ ಹುದ್ದೆಗೆ ನಿಯುಕ್ತಿಗೊಂಡಿದ್ದಾರೆ. ಎರಡೂವರೆ ವರ್ಷಗಳ ಸುದೀರ್ಘ ಅಧಿಕಾರದಲ್ಲಿದ್ದ ಅವರು ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ.

ನೂತನವಾಗಿ ನೇಮಕಗೊಂಡಿರುವ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ ಅವರು ಹಣಕಾಸು ಇಲಾಖೆಯಲ್ಲಿ(ಬಜೆಟ್ ಮತ್ತು ಸಂಪನ್ಮೂಲ) ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ರಾಜ್ಯ ಸರಕಾರದ ಮುಂದಿನ ಆದೇಶದವರೆಗೆ ಕಲಬುರಗಿ ಜಿಲ್ಲಾಧಿಕಾರಿ ಹುದ್ದೆ ಅಲಂಕರಿಸುವಂತೆ ಆದೇಶ ಹೊರಡಿಸಿದೆ.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...